Justice M Nagaprasanna 
ಸುದ್ದಿಗಳು

ಇಂದು 522 ಪ್ರಕರಣಗಳನ್ನು ವಿಚಾರಣೆ ನಡೆಸಲಿರುವ ನ್ಯಾ. ನಾಗಪ್ರಸನ್ನ

ಕೆಲವು ತಿಂಗಳ ಹಿಂದೆ ಇದೇ ನ್ಯಾಯಮೂರ್ತಿಗಳ ಮುಂದೆ 480ಕ್ಕೂ ಅಧಿಕ ಪ್ರಕರಣಗಳನ್ನು ಪಟ್ಟಿ ಮಾಡಲಾಗಿತ್ತು. ಬಹುತೇಕ ಎಲ್ಲಾ ಪ್ರಕರಣಗಳನ್ನು ಅಂದು ನ್ಯಾ. ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ್ದರು.

Bar & Bench

ಕರ್ನಾಟಕ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಇಂದು ಭರ್ತಿ 522 ಪ್ರಕರಣಗಳನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಇದೊಂದು ಮೈಲುಗಲ್ಲು ಎಂದೇ ಹೇಳಲಾಗಿದೆ.

ಕೆಲವು ತಿಂಗಳ ಹಿಂದೆ ಇದೇ ನ್ಯಾಯಮೂರ್ತಿಗಳ ಮುಂದೆ 480ಕ್ಕೂ ಅಧಿಕ ಪ್ರಕರಣಗಳನ್ನು ಪಟ್ಟಿ ಮಾಡಲಾಗಿತ್ತು. ಬಹುತೇಕ ಎಲ್ಲಾ ಪ್ರಕರಣಗಳನ್ನು ಅಂದು ನ್ಯಾ. ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ್ದರು.

ಇದಕ್ಕೂ ಮುನ್ನ, ನ್ಯಾಯಮೂರ್ತಿ ಬಿ ಶ್ರೀನಿವಾಸ ಗೌಡ ಅವರು 700ಕ್ಕೂ ಹೆಚ್ಚು ಪ್ರಕರಣಗಳನ್ನು ವಿಚಾರಣೆ ನಡೆಸಿದ್ದರು ಎಂದು ಮೂಲಗಳು ಬಾರ್‌ ಅಂಡ್‌ ಬೆಂಚ್‌ಗೆ ಮಾಹಿತಿ ನೀಡಿವೆ.