ಸುದ್ದಿಗಳು

ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿ ವರ್ಗಕ್ಕೆ ಕಾನೂನು ಕಾರ್ಯಾಗಾರ

Bar & Bench

ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿ ವರ್ಗಕ್ಕೆ ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ-2005ರ ಬಗ್ಗೆ ಮಾಹಿತಿ ನೀಡುವ ಎರಡು ದಿನಗಳ ಕಾನೂನು ಕಾರ್ಯಾಗಾರ ಮಂಗಳವಾರ ಆರಂಭವಾಯಿತು.

ನಗರದ ಜಿಲ್ಲಾ ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಕಾರ್ಯಾಗಾರವನ್ನು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ. ಜಿ. ಶೋಭಾ ಉದ್ಘಾಟಿಸಿದರು. ಕಾಯಿದೆಯ ಬಗ್ಗೆ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಟಿ. ಪಾಪ ಬೋವಿ, ಮಂಗಳೂರು ನಗರ ಸಂಶೋಧನಾ ಕೇಂದ್ರದ ನಿರ್ದೇಶಕಿ ಹರಿಣಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.

ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು,  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂರಕ್ಷಣಾ ಅಧಿಕಾರಿಗಳು, ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿಗಳು ಮತ್ತು ಕಾನೂನು ಸಲಹೆಗಾರರಿಗಾಗಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಎರಡು ದಿನಗಳ ಕಾರ್ಯಾಗಾರದಲ್ಲಿ ನ್ಯಾಯವಾದಿಗಳಾದ ಎಸ್.ಪಿ. ಚಂಗಪ್ಪ, ನಿಕೇಶ್ ಶೆಟ್ಟಿ, ಗೌರಿ ಪೈ, ಹರಿಣಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಲಿದ್ದಾರೆ.