Air India
ಏರ್ ಇಂಡಿಯಾ ಬಂಡವಾಳ ಹಿಂತೆಗೆತ ಮತ್ತು ಖಾಸಗೀಕರಣಕ್ಕೆ ಮುಂದಾಗುವ ಮುನ್ನ ಕೇಂದ್ರ ಸರ್ಕಾರ ತಮ್ಮ ಹಕ್ಕುಗಳು ಮತ್ತು ಸೇವಾ ಪರಿಸ್ಥಿತಿಗಳನ್ನು ರಕ್ಷಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಏರ್ ಕಾರ್ಪೊರೇಷನ್ ನೌಕರರ ಒಕ್ಕೂಟ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ಆದೇಶ ಕಾಯ್ದಿರಿಸಿದೆ. ಖಾಸಗೀಕರಣ ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತತೆಯ ಕೊರತೆ ಕಾಣುತ್ತಿದೆ. ತಮ್ಮ ಕುಟುಂಬಗಳ ಹಿತಾಸಕ್ತಿ ಕುರಿತು ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಕೆಲಸಗಾರರ ಹಿತಾಸಕ್ತಿ ರಕ್ಷಿಸಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಪ್ರತಿವಾದಿಗಳು ವಾದಿಸಿದ್ದರು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.