Vidhana Soudha  
ಸುದ್ದಿಗಳು

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಪ್ರಕರಣ: ಮೂವರು ಆರೋಪಿಗಳನ್ನು ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿದ ನ್ಯಾಯಾಲಯ

ಬಂಧಿತರಾದ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಹಮ್ಮದ್‌ ನಾಶಿಪುಡಿ, ಇಲ್ತಾಜ್‌ ಮತ್ತು ಮುನಾವರ್‌ ಅವರನ್ನು ಕೋರಮಂಗಲದಲ್ಲಿನ 39ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿ ವಿಜೇತ್‌ ಅವರ ಮುಂದೆ ಪೊಲೀಸರು ಹಾಜರುಪಡಿಸಿದರು.

Bar & Bench

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಅವರು ಸೋಮವಾರ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಬಂಧಿತರಾದ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಹಮ್ಮದ್‌ ನಾಶಿಪುಡಿ, ಇಲ್ತಾಜ್‌ ಮತ್ತು ಮುನಾವರ್‌ ಅವರನ್ನು ಕೋರಮಂಗಲದಲ್ಲಿನ 39ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿ ವಿಜೇತ್‌ ಅವರ ಮುಂದೆ ಪೊಲೀಸರು ಹಾಜರುಪಡಿಸಿದರು.

ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಐದು ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್‌, ಆರೋಪಿಗಳನ್ನು ಎರಡು ದಿನ ಪೊಲೀಸರ ವಶಕ್ಕೆ ನೀಡಿದರು.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೈಯ್ಯದ್‌ ನಾಸಿರ್‌ ಹುಸೇನ್‌ ಅವರು ಜಯಗಳಿಸಿದ ಹಿನ್ನೆಲೆಯಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಆರೋಪಿಗಳು ಘೋಷಣೆ ಕೂಗಿದ್ದರು ಎಂಬ ಆರೋಪ ಭಾರಿ ಚರ್ಚೆ ಹುಟ್ಟುಹಾಕಿತ್ತು. ಈ ಸಂಬಂಧ ವಿಡಿಯೊ ತುಣುಕನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರಿಶೀಲನೆಗೆ ಕಳುಹಿಸಿ, ಅದರ ವರದಿ ಆಧರಿಸಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿತ್ತು.