Karnataka HC 
ಸುದ್ದಿಗಳು

ರಾಜ್ಯ ಮಾಹಿತಿ ಆಯುಕ್ತರ ನೇಮಕ: ಜೂನ್‌ಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮಾಹಿತಿ ಆಯುಕ್ತರ ಹುದ್ದೆಯ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಕೆ ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ವಿಚಾರಣೆ ನಡೆಸಿತು.

Bar & Bench

ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರ ನೇಮಕಾತಿ ಪ್ರಶ್ನಿಸಿದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಜೂನ್‌ ಮೂರನೇ ವಾರಕ್ಕೆ ಮುಂದೂಡಿದೆ.

ಮಾಹಿತಿ ಆಯುಕ್ತರ ಹುದ್ದೆಯ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಕೆ ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ ಶೆಟ್ಟಿ ಅವರು ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕಿದ್ದು ವಿಚಾರಣೆ ಬಾಕಿಯಿದೆ ಎಂಬ ಅಂಶವನ್ನು ಪೀಠದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ಪೀಠ ವಿಚಾರಣೆಯನ್ನು ಜೂನ್‌ ಮೂರನೇ ವಾರಕ್ಕೆ ಮುಂದೂಡಿತು.

ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಎ ಎಂ ಪ್ರಸಾದ್ ಹಾಗೂ ಆಯುಕ್ತರಾಗಿ ಕೆ‌ ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಚನ್ನಾಳ, ಎಸ್ ರಾಜಶೇಖರ, ಕೆ ಬದ್ರುದ್ದೀನ್ ಮತ್ತು ಬಿ ಆರ್ ಮಮತಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ 2025ರ ಜನವರಿ 30ರಂದು ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.