Justice BR Gavai, Justice SK Kaul, CJI DY Chandrachud, Justice Sanjiv Khanna and Justice Suryakant 
ಸುದ್ದಿಗಳು

ಸಂವಿಧಾನದ 370ನೇ ವಿಧಿ ರದ್ದತಿ: ಜುಲೈ 11ರಂದು ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನ್ಯಾಯಾಲಯದ ನಿರ್ದೇಶನಗಳಿಗಾಗಿ ಪ್ರಕರಣವನ್ನು ಜುಲೈ 11 ರಂದು ಪಟ್ಟಿ ಮಾಡಲಾಗಿದ್ದು ಅಧಿಕಾರಿ ಶಾ ಫೈಸಲ್ ಅವರ ಅರ್ಜಿಯನ್ನು ಹಿಂಪಡೆಯಬಹುದೇ ಎಂಬ ವಿಚಾರವನ್ನು ಸಹ ಅಂದು ನ್ಯಾಯಾಲಯ ವಿಚಾರಣೆ ನಡೆಸಲಿದೆ.

Bar & Bench

ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿ ರದ್ದುಗೊಳಿಸಿದ ಸುಮಾರು ನಾಲ್ಕು ವರ್ಷಗಳ ನಂತರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚದೂಡ್‌ ನೇತೃತ್ವದ ಸಾಂವಿಧಾನಿಕ ಪೀಠ ರದ್ದತಿಗೆ ಆಕ್ಷೇಪ ವ್ಯಕ್ತಪಡಿಸಿರುವ 20 ಅರ್ಜಿಗಳ ವಿಚಾರಣೆ ನಡಸಲಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಹಾಗೂ ಸೂರ್ಯಕಾಂತ್ ಅವರೂ ಪೀಠದಲ್ಲಿರಲಿದ್ದಾರೆ.

ನಿರ್ದೇಶನಗಳಿಗಾಗಿ ಪ್ರಕರಣವನ್ನು ಜುಲೈ 11 ರಂದು ಪ್ರಕರಣವನ್ನು ಪಟ್ಟಿ ಮಾಡಲಾಗಿದ್ದು ಅಧಿಕಾರಿ ಶಾ ಫೈಸಲ್ ಅವರ ಅರ್ಜಿಯನ್ನು ಹಿಂಪಡೆಯಬಹುದೇ ಎಂಬ ವಿಚಾರವನ್ನು ಸಹ ಅಂದು ನ್ಯಾಯಾಲಯ ವಿಚಾರಣೆ ನಡೆಸಲಿದೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸುವ ಮೂಲಕ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.