Arvind Kejriwal, Supreme Court and ED
Arvind Kejriwal, Supreme Court and ED  Facebook
ಸುದ್ದಿಗಳು

ಇ ಡಿ ಬಂಧನ ನಿರ್ಧಾರ ಎತ್ತಿ ಹಿಡಿದ ದೆಹಲಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೇಜ್ರಿವಾಲ್‌

Bar & Bench

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ ಡಿ) ತಮ್ಮನ್ನು ಬಂಧಿಸಿರುವುದು ಮತ್ತು ಆನಂತರ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್‌ ಕದತಟ್ಟಿದ್ದಾರೆ.

ಇದೇ ಮನವಿ ಒಳಗೊಂಡಿದ್ದ ಕೇಜ್ರಿವಾಲ್‌ ಅವರ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ವಜಾ ಮಾಡಿತ್ತು. ಹಗರಣದಲ್ಲಿ ಕೇಜ್ರಿವಾಲ್‌ ಅವರು ಭಾಗಿಯಾಗಿರುವುದಕ್ಕೆ ಸಾಕ್ಷಿ ಇದೆ ಎಂದು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠ ಹೇಳಿತ್ತು.

ಲಂಚದ ರೂಪದಲ್ಲಿ ಪಡೆದ ಹಣವನ್ನು 2022ರ ಗೋವಾ ವಿಧಾಸನಭೆ ಚುನಾವಣೆಯಲ್ಲಿ ಪ್ರಚಾರಕ್ಕೆ ಬಳಕೆ ಮಾಡಲಾಗಿದೆ ಎಂದು ದೆಹಲಿ ಹೈಕೋರ್ಟ್‌ ಆದೇಶದಲ್ಲಿ ಹೇಳಿದೆ. ಇದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಾಗಿದೆ.

2021-22ರ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ 2022ರ ಜುಲೈ 20ರಂದು ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸೆಕ್ಸೇನಾ ನೀಡಿದ ದೂರು ಆಧರಿಸಿ ಸಿಬಿಐ 2022ರ ಆಗಸ್ಟ್‌ 17ರಂದು ಪ್ರಕರಣ ದಾಖಲಿಸಿತ್ತು. ಇದನ್ನು ಆಧರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಿಸಿದೆ.