CLAT
CLAT 
ಸುದ್ದಿಗಳು

ಪ್ರಾದೇಶಿಕ ಭಾಷೆಗಳಲ್ಲಿ ಸಿಎಲ್ಎಟಿ: ದೆಹಲಿ ಹೈಕೋರ್ಟ್‌ನಲ್ಲಿನ ಪಿಐಎಲ್‌ಗೆ ಭಾರತೀಯ ವಕೀಲರ ಪರಿಷತ್ ಬೆಂಬಲ

Bar & Bench

ಇಂಗ್ಲಿಷ್ ಜೊತೆಗೆ ಹಿಂದಿ ಮತ್ತಿತರ ಪ್ರಾದೇಶಿಕ ಭಾಷೆಗಳಲ್ಲಿ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ  (ಸಿಎಲ್‌ಎಟಿ) ನಡೆಸಬೇಕೆಂದು ಕೋರಿ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಭಾರತೀಯ ವಕೀಲರ ಪರಿಷತ್‌ ಬೆಂಬಲಿಸಿದೆ.

ಇಂಗ್ಲಿಷ್ ಹೊರತುಪಡಿಸಿ ಇತರ ಭಾಷೆಗಳಲ್ಲಿ ಸಿಎಲ್‌ಎಟಿ ನಡೆಸುವುದರಿಂದ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಮತ್ತು ಕಾನೂನು ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಾಗುತ್ತದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಿಸಿಐ ತಿಳಿಸಿದೆ.

ಹಿಂದಿ ಮತ್ತು ಇತರ ಪ್ರಾದೇಶಿಕ ಭಾಷೆಗಳಲ್ಲಿ 2024ನೇ  ಸಾಲಿನ ಸಿಎಲ್‌ಎಟಿ ನಡೆಸಬೇಕೆಂದು ಒತ್ತಾಯಿಸಿ ಕಾನೂನು ವಿದ್ಯಾರ್ಥಿ ಸುಧಾಂಶು ಪಾಠಕ್ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಬಿಸಿಐ ಈ ಅಫಿಡವಿಟ್‌ ಸಲ್ಲಿಸಿದೆ.

ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುವುದರಿಂದ ಇಂಗ್ಲಿಷ್‌ ಹೊರತಾದ ಮಾಧ್ಯಮಗಳಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗುತ್ತದೆ ಎಂದು ಪಾಠಕ್ ವಾದಿಸಿದ್ದಾರೆ.