<div class="paragraphs"><p>Anil Deshmukh</p></div>

Anil Deshmukh

 

punekarnews

ಸುದ್ದಿಗಳು

ಅನಿಲ್ ದೇಶಮುಖ್ ಜಾಮೀನು ಅರ್ಜಿ ತಿರಸ್ಕರಿಸಿದ ಮುಂಬೈ ನ್ಯಾಯಾಲಯ

Bar & Bench

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ ನಾಯಕ ಅನಿಲ್ ದೇಶಮುಖ್ ಅವರ ಜಾಮೀನು ಕೋರಿಕೆಯನ್ನು ಮುಂಬೈ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ಅಡಿಯಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಆರ್‌ ಎನ್ ರೋಕಡೆ ಅವರು ಈ ಆದೇಶ ಹೊರಡಿಸಿದ್ದಾರೆ.

ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 167 ರ ಅಡಿಯಲ್ಲಿ ಸೂಚಿಸಿದಂತೆ 60 ದಿನಗಳ ಶಾಸನಬದ್ಧ ಅವಧಿಯೊಳಗೆ ವಿಶೇಷ ನ್ಯಾಯಾಲಯ ಆರೋಪಪಟ್ಟಿಯನ್ನು ಪರಿಗಣಿಸದ ಹಿನ್ನೆಲೆಯಲ್ಲಿ ಜಾಮೀನು ಪಡೆಯಲು ಅರ್ಹ ಎಂದು ಮನವಿಯಲ್ಲಿ, ದೇಶಮುಖ್ ಅವರು ತಿಳಿಸಿದ್ದರು.

ದೇಶ್‌ಮುಖ್ ಅವರು ನವೆಂಬರ್ 15, 2021 ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಭ್ರಷ್ಟಾಚಾರ ಮತ್ತು ತಮ್ಮ ಸ್ಥಾನದ ದುರ್ಬಳಕೆಗೆ ಸಂಬಂಧಿಸಿದಂತೆ ದೇಶಮುಖ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಸಿಬಿಐ ನ್ಯಾಯಾಲಯ ನಿರ್ದೇಶಿಸಿದ ಬೆನ್ನಿಗೇ ಜಾರಿ ನಿರ್ದೇಶನಾಲಯ ಮಾಜಿ ಗೃಹ ಸಚಿವರು ಮತ್ತು ಅವರ ಸಂಬಂಧಿಕರ ವಿರುದ್ಧ ತನಿಖೆ ಮುಂದಾಗಿತ್ತು.