Aryan khan 
ಸುದ್ದಿಗಳು

ವಿಲಾಸಿ ಹಡಗು ಮಾದಕವಸ್ತು ಪ್ರಕರಣ: ಆರ್ಯನ್ ಖಾನ್‌ಗೆ ಜಾಮೀನು ನಿರಾಕರಿಸಿದ ಮುಂಬೈ ಸೆಷನ್ಸ್ ನ್ಯಾಯಾಲಯ

ಸಹ ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮೂನ್‌ಮೂನ್‌ ಧಮೇಚಾ ಅವರ ಜಾಮೀನು ಅರ್ಜಿಯನ್ನು ಕೂಡ ತಿರಸ್ಕರಿಸಲಾಗಿದೆ.

Bar & Bench

ವಿಲಾಸಿ ಹಡಗು ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ಸ್ ಕೋರ್ಟ್ ಬುಧವಾರ ತಿರಸ್ಕರಿಸಿದೆ. ಸಹ ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮೂನ್‌ಮೂನ್‌ ಧಮೇಚಾ ಅವರ ಜಾಮೀನು ಅರ್ಜಿಯನ್ನು ಕೂಡ ತಿರಸ್ಕರಿಸಲಾಗಿದೆ.

ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ವಿಲಾಸಿ ಹಡಗಿನ ಮೇಲೆ ಎನ್ ಸಿಬಿ ದಾಳಿ ನಡೆಸಿದ ನಂತರ ಅಕ್ಟೋಬರ್ 2, 2021ರಂದು ಎನ್ ಸಿಬಿ ಆರ್ಯನ್‌ ಅವರನ್ನು ವಶಕ್ಕೆ ಪಡೆದಿತ್ತು. ಅಕ್ಟೋಬರ್ 3 ರಂದು ಬಂಧಿಸಲಾಯಿತು . ಆರ್ಯನ್‌ ವಿರುದ್ಧ ಎನ್‌ಡಿಪಿಎಸ್‌ ಕಾಯಿದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಹಾಗೂ 35ರ ಅಡಿ ಆರೋಪ ಹೊರಿಸಲಾಗಿತ್ತು.

ಅಕ್ಟೋಬರ್ 4 ರವರೆಗೆ ಅವರನ್ನು ಎನ್ ಸಿಬಿ ವಶಕ್ಕೆ ನೀಡಲಾಗಿತ್ತು ಬಳಿಕ ಅ. 7ರವರೆಗೆ ಕಸ್ಟಡಿ ಅವಧಿ ವಿಸ್ತರಿಸಲಾಗಿತ್ತು. ಬಳಿಕ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಅವರು ಆ ದಿನವೇ ಜಾಮೀನು ಕೋರಿದ್ದರು.

ಜಾಮೀನು ಅರ್ಜಿಯ ವಿಚಾರಣೆಗೆ ವಿಶೇಷ ಸೆಷನ್ಸ್ ನ್ಯಾಯಾಲಯ ಮಾತ್ರ ಅರ್ಹ ಎಂದು ತಿಳಿಸಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್ ಎಂ ನೇರ್ಳೀಕರ್‌ ಅರ್ಜಿ ತಿರಸ್ಕರಿಸಿದ್ದರು. ತರುವಾಯ, ಖಾನ್ ಜಾಮೀನು ಕೋರಿ ಎನ್‌ಡಿಪಿಎಸ್‌ ಕಾಯಿದೆ ವ್ಯಾಪ್ತಿಯ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.

ಖಾನ್ ಪರ ಹಿರಿಯ ವಕೀಲ ಅಮಿತ್ ದೇಸಾಯಿ ಮತ್ತು ಎನ್‌ಸಿಬಿಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ವಾದಗಳನ್ನು ಆಲಿಸಿದ ಬಳಿಕ, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿ.ವಿ.ಪಾಟೀಲ್ ಅವರು ಅಕ್ಟೋಬರ್ 20ರಂದು ತೀರ್ಪು ಕಾಯ್ದಿರಿಸಿದ್ದರು.

ಆದೇಶವನ್ನು ಇಲ್ಲಿ ಓದಿ:

Aryan_Khan_Bail_order.pdf
Preview