Anil Deshmukh, CBI
Anil Deshmukh, CBI  A1
ಸುದ್ದಿಗಳು

ಭ್ರಷ್ಟಾಚಾರ ಪ್ರಕರಣ: ಅನಿಲ್‌ ದೇಶಮುಖ್ ಅವರನ್ನು ಏ. 29 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಮುಂಬೈ ನ್ಯಾಯಾಲಯ

Bar & Bench

ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಏಪ್ರಿಲ್ 29 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಶನಿವಾರ ಆದೇಶಿಸಿದೆ.

ದೇಶಮುಖ್ ಅವರ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೋರಿದ್ದ ಸಿಬಿಐ ಮನವಿಯನ್ನು ವಿಶೇಷ ನ್ಯಾಯಾಧೀಶ ಡಿ ಪಿ ಶಿಂಗಾಡೆ ತಿರಸ್ಕರಿಸಿದರು. ದೇಶಮುಖ್‌ ಸಹಚರರಾದ ಕುನದನ್‌ ಶಿಂಧೆ, ಸಂಜೀವ್ ಪಲಾಂಡೆ ಹಾಗೂ ಸೇವೆಯಿಂದ ವಜಾಗೊಂಡಿರುವ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

“ತನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಬಿಐಗೆ ಸಾಕಷ್ಟು ಕಾಲಾವಕಾಶ ನೀಡಲಾಗಿದೆ. ಆರೋಪಿಗಳನ್ನು ಇನ್ನಷ್ಟು ಕಾಲ ತನ್ನ ವಶಕ್ಕೆ ಒಪ್ಪಿಸಬೇಕು ಎಂದು ಅದು ನೀಡಿರುವ ಕಾರಣ ತೃಪ್ತಿಕರವಾಗಿಲ್ಲ. ಆದ್ದರಿಂದ ಆರೋಪಿಗಳನ್ನು ಸಿಬಿಐ ವಶಕ್ಕೆ ಒಪ್ಪಿಸಲು ಒಲವು ತೋರುತ್ತಿಲ್ಲ" ಎಂದು ನ್ಯಾಯಾಲಯ ವಿವರಿಸಿದೆ.