JUSTICE PB VARALE
JUSTICE PB VARALE 
ಸುದ್ದಿಗಳು

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ ಬಿ ವರಾಳೆ: ಕೇಂದ್ರದ ಅಧಿಸೂಚನೆ

Bar & Bench

ಬಾಂಬೆ ಹೈಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನ್ಯಾಯಮೂರ್ತಿ ಪಿ ಬಿ ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕಳೆದ ತಿಂಗಳು ಭಾರತದ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಪದೋನ್ನತಿಗೆ ಶಿಫಾರಸು ಮಾಡಿತ್ತು.

ಬಾಂಬೆ ಹೈಕೋರ್ಟಿನಲ್ಲಿ ಅತಿ ಹಿರಿಯ ನ್ಯಾಯಮೂರ್ತಿಯಾಗಿರುವ ನ್ಯಾ. ವರಾಳೆ ಅವರು ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ವೃತ್ತಿಯ ಆರಂಭದಲ್ಲಿ ವಕೀಲರಾದ ಎಸ್ ಎನ್ ಲೋಯಾ ಅವರ ಬಳಿ ಪ್ರಾಕ್ಟೀಸ್‌ ಆರಂಭಿಸಿದ್ದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಜುಲೈ 18, 2008 ರಂದು ನೇಮಕಗೊಂಡಿದ್ದರು.

ನ್ಯಾ. ವರಾಳೆ ಅವರು ಬಾಂಬೆ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗುತ್ತಿರುವ ನಾಲ್ಕನೇ ನ್ಯಾಯಮೂರ್ತಿ. ನ್ಯಾಯಮೂರ್ತಿಗಳಾದ ಎಸ್‌ ಪಿ ಭರೂಚಾ (ಜನವರಿ 1991-ಜೂನ್ 1992) ಮತ್ತು  ಎಂ ಎಲ್ ಪೆಂಡ್ಸೆ (ಜುಲೈ 1995-ಮಾರ್ಚ್ 1996), ಈಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಎ ಎಸ್ ಓಕಾ (ಮೇ 2019-ಆಗಸ್ಟ್ 2021) ಅವರು ಈ ಹಿಂದೆ ಬಾಂಬೆ ಹೈಕೋರ್ಟ್‌ನಿಂದ ಸೇವೆ ಸಲ್ಲಿಸಿರುವ ಇತರೆ ಮೂವರು ಮುಖ್ಯ ನ್ಯಾಯಮೂರ್ತಿಗಳು.