Justice UU Lalit, CJI NV Ramana 
ಸುದ್ದಿಗಳು

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಯು ಯು ಲಲಿತ್ ಹೆಸರು ಶಿಫಾರಸು ಮಾಡಿದ ಸಿಜೆಐ ರಮಣ

ನ್ಯಾಯಮೂರ್ತಿ ಲಲಿತ್ ಅವರ ಹೆಸರನ್ನು ಶಿಫಾರಸು ಮಾಡಿ ಗುರುವಾರ ಬೆಳಿಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ನ್ಯಾ. ರಮಣ ತಮ್ಮ ಶಿಫಾರಸು ಪತ್ರದ ಪ್ರತಿಯನ್ನು ನ್ಯಾ. ಲಲಿತ್ ಅವರಿಗೆ ನೀಡಿದರು.

Bar & Bench

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಯು ಯು ಲಲಿತ್‌ ಅವರ ಹೆಸರನ್ನು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಶಿಫಾರಸು ಮಾಡಿದ್ದಾರೆ.

ನ್ಯಾಯಮೂರ್ತಿ ಲಲಿತ್ ಅವರ ಹೆಸರನ್ನು ಶಿಫಾರಸು ಮಾಡುವಂತೆ ಗುರುವಾರ ಬೆಳಿಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ನ್ಯಾ. ರಮಣ ತಮ್ಮ ಶಿಫಾರಸು ಪತ್ರದ ಪ್ರತಿಯನ್ನು ನ್ಯಾ. ಲಲಿತ್ ಅವರಿಗೆ ನೀಡಿದರು.

ತಮ್ಮ ಉತ್ತರಾಧಿಕಾರಿ ಹೆಸರನ್ನು ಶಿಫಾರಸು ಮಾಡುವಂತೆ ಸಿಜೆಐ ರಮಣ ಅವರಿಗೆ ಸಚಿವ ಕಿರೆನ್‌ ರಿಜಿಜು ಪತ್ರ ಬರೆದಿದ್ದರು. ಸಿಜೆಐ ಕಾರ್ಯದರ್ಶಿ ಕಚೇರಿ ಬುಧವಾರ ರಾತ್ರಿ ಪತ್ರ ಸ್ವೀಕರಿಸಿತ್ತು.

ಸಿಜೆಐ ರಮಣ ಅವರು ಆಗಸ್ಟ್ 26ರಂದು ನಿವೃತ್ತರಾಗಲಿದ್ದಾರೆ. ಬಳಿಕ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಲಲಿತ್‌ ಬರುವ ನವೆಂಬರ್ 8ರಂದು ನಿವೃತ್ತರಾಗಲಿದ್ದಾರೆ. ಬಹಳ ಕಡಿಮೆ ಅವಧಿಗೆ ಅವರು ಸುಪ್ರೀಂ ಕೋರ್ಟ್‌ ಚುಕ್ಕಾಣಿ ಹಿಡಿಯಲಿದ್ದಾರೆ.

ತರುವಾಯ ನ್ಯಾ. ಡಿ ವೈ ಚಂದ್ರಚೂಡ್‌ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದು ಎರಡು ವರ್ಷಗಳಷ್ಟು ದೀರ್ಘಕಾಲ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.