Karnataka High Court 
ಸುದ್ದಿಗಳು

ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿಸಲು ಶಿಫಾರಸ್ಸು ಮಾಡಿದ ಸುಪ್ರೀಂ ಕೊಲಿಜಿಯಂ

ಕರ್ನಾಟಕ ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 45 ನ್ಯಾಯಮೂರ್ತಿಗಳ ಹುದ್ದೆಗಳು ಮಾತ್ರ ಭರ್ತಿಯಾಗಿವೆ.

Bar & Bench

ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿದೆ. ಏಪ್ರಿಲ್‌ 14ರಂದು ನಡೆದ ಸಭೆಯ ಬಳಿಕ ಈ ಶಿಫಾರಸ್ಸುಗಳನ್ನು ಕೊಲಿಜಿಯಂ ಮಾಡಿದೆ.

ನ್ಯಾಯಾಂಗ ಅಧಿಕಾರಿಗಳಾದ ರಾಜೇಶ್ವರಿ ನಾರಾಯಣ ಹೆಗ್ಡೆ, ಕೆ ಗಣೇಶ್‌ ಶಾಂತಿ ಮತ್ತು ಮಹದೇವಪ್ಪ ಬೃಂಗೇಶ್‌ ಅವರ ಪದೋನ್ನತಿಗೆ ಶಿಫಾರಸ್ಸು ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 45 ನ್ಯಾಯಮೂರ್ತಿಗಳ ಹುದ್ದೆಗಳು ಮಾತ್ರ ಭರ್ತಿಯಾಗಿವೆ.

Collegium Statement Karnataka HC.pdf
Preview