Justice Dinesh Kumar Sharma 
ಸುದ್ದಿಗಳು

ದೆಹಲಿಯಿಂದ ಕಲ್ಕತ್ತಾ ಹೈಕೋರ್ಟ್‌ಗೆ ನ್ಯಾ. ದಿನೇಶ್ ಕುಮಾರ್ ಶರ್ಮಾ ವರ್ಗಾವಣೆಗೆ ಕೊಲಿಜಿಯಂ ಶಿಫಾರಸು

ಕಲ್ಕತ್ತಾ ಹೈಕೋರ್ಟ್‌ನಲ್ಲಿ ಒಟ್ಟು 72 ನ್ಯಾಯಮೂರ್ತಿಗಳ ಸಂಖ್ಯಾಬಲವಿದ್ದು, ಪ್ರಸ್ತುತ 44 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದರೆ 28 ಹುದ್ದೆಗಳು ಖಾಲಿ ಇವೆ.

Bar & Bench

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು  ಕಲ್ಕತ್ತಾ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಮಾರ್ಚ್ 27ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನ್ಯಾ. ಶರ್ಮಾ 1992ರಲ್ಲಿ ದೆಹಲಿ ನ್ಯಾಯಾಂಗ ಸೇವೆಗೆ ಸೇರಿದ್ದರು. 2003 ರಲ್ಲಿ ಉನ್ನತ ನ್ಯಾಯಾಂಗ ಸೇವೆಗೆ ಬಡ್ತಿ ಪಡೆದರು. ಅವರು ದೆಹಲಿ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಮತ್ತು ನವದೆಹಲಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಸೇರಿದಂತೆ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಕಾಮನ್‌ವೆಲ್ತ್ ನ್ಯಾಯಾಂಗ ಶಿಕ್ಷಣ ಸಂಸ್ಥೆಯ ಫೆಲೋ ಆಗಿರುವ ಅವರು ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಯೋಜನೆಯಡಿಯಲ್ಲಿ ಮಧ್ಯಸ್ಥಿಕೆದಾರರಿಗೆ ತರಬೇತಿ ನೀಡಿದ್ದಾರೆ. ಅವರು ಫೆಬ್ರವರಿ 28, 2022 ರಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನ್ಯಾ. ಶರ್ಮಾ ಅವರು ದುರ್ಬಲ ಸಾಕ್ಷಿಗಳ ನ್ಯಾಯಾಲಯೇತರ ಒಗ್ಗೂಡಿಸುವಿಕೆ ಕಾರ್ಯಕ್ರಮ ಮತ್ತು ಸಂಬಂಧಿತ ಮಾರ್ಗಸೂಚಿಗಳ ಕರಡು ರಚನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಕಲ್ಕತ್ತಾ ಹೈಕೋರ್ಟ್‌ನಲ್ಲಿ ಒಟ್ಟು 72 ನ್ಯಾಯಮೂರ್ತಿಗಳ ಸಂಖ್ಯಾಬಲವಿದ್ದು, ಪ್ರಸ್ತುತ 44 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದರೆ  28 ಹುದ್ದೆಗಳು ಖಾಲಿ ಇವೆ.

[ಅಧಿಸೂಚನೆಯ ಪ್ರತಿಗಾಗಿ ಇಲ್ಲಿ ಕ್ಲಿಕ್ಕಿಸಿ]

Justice_Dinesh_Kumar_Sharma.pdf
Preview