Karnataka High Court 
ಸುದ್ದಿಗಳು

ದಾಸರಹಳ್ಳಿ ರಸ್ತೆಗಳ ಡಾಂಬರೀಕರಣ: ಸರ್ಕಾರದಿಂದ ₹25 ಕೋಟಿ ಬಿಡುಗಡೆಯಾಗಿರುವ ಬಗ್ಗೆ ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ

Bar & Bench

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಏಳು ವಾರ್ಡ್‌ಗಳಲ್ಲಿ ಹಾಳಾಗಿರುವ ರಸ್ತೆಗಳ ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾರ್ಯಕ್ಕೆ ರಾಜ್ಯ ಸರ್ಕಾರವು 25 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ ಎಂದು ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ ನೀಡಿದೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳ ರಸ್ತೆಗಳು ಹಾಳಾಗಿದ್ದರೂ ದುರಸ್ತಿ ಮಾಡುತ್ತಿಲ್ಲ ಎಂದು ಆರೋಪಿಸಿ ವಕೀಲ ಅಶ್ವತ್ಥ್ ನಾರಾಯಣ ಚೌಧರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ಎನ್‌ ಕೆ ರಮೇಶ್‌ ಅವರು, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿ ಹಾಗೂ ಡಾಂಬರೀಕರಣಕ್ಕೆ ಸರ್ಕಾರ 25 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಆ ಆದೇಶ ಪ್ರತಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಅದನ್ನು ದಾಖಲಿಸಿಕೊಂಡ ಪೀಠವು ಸರ್ಕಾರ ಹಣ ಬಿಡುಗಡೆ ಮಾಡಿರುವ ಬಗೆಗಿನ ಆದೇಶ ಪ್ರತಿಯನ್ನು ರಿಜಿಸ್ಟ್ರಿಗೆ ಸಲ್ಲಿಸುವಂತೆ ಬಿಬಿಎಂಪಿ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮಾರ್ಚ್‌ 7ಕ್ಕೆ ಮುಂದೂಡಿತು.