ದೇಶದ ರಾಜಧಾನಿಯಲ್ಲಿ ಮಾದಕ ವಸ್ತು ಮತ್ತು ಮದ್ಯ ಉತ್ಪಾದನೆ, ವಿತರಣೆ ಮತ್ತು ಸೇವನೆಯನ್ನು ನಿಷೇಧಿಸಬೇಕೆಂದು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಸರ್ಕಾರದ ಹೊಸ ಮದ್ಯ ನೀತಿಯಿಂದಾಗಿ, ನಗರದಲ್ಲಿ ಮದ್ಯದಂಗಡಿಗಳ ಸಂಖ್ಯೆ ಮೂರು ಪಟ್ಟು ಏರಿಕೆಯಾಗಲಿದ್ದು ಇದರಿಂದ ಕಾನೂನು ಆಡಳಿತ ಮತ್ತು ಆರೋಗ್ಯದ ಹಕ್ಕಿಗೆ ಧಕ್ಕೆಯಾಗಲಿದೆ. ದೆಹಲಿ ದೇಶದ ಮದ್ಯ ರಾಜಧಾನಿಯಾಗುತ್ತಿದೆ ಎಂದು ವಕೀಲ ಮತ್ತು ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.