Rahul Gandhi
Rahul Gandhi Facebook
ಸುದ್ದಿಗಳು

ದೆಹಲಿ ಕಂಟೋನ್ಮೆಂಟ್ ಅತ್ಯಾಚಾರ ಪ್ರಕರಣ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ಹಿಂಪಡೆದ ಬಿಜೆಪಿ ವಕ್ತಾರ

Bar & Bench

ಅತ್ಯಾಚಾರಕ್ಕೊಳಗಾಗಿದ್ದ ಮೃತ ಮಹಿಳೆಯ ಮತ್ತು ಆಕೆಯ ಕುಟುಂಬ ಸದಸ್ಯರ ಗುರುತನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬಹಿರಂಗಪಡಿಸಿದ್ದಾರೆ ಎಂದು ಆರೋಪಿಸಿ ದೆಹಲಿ ನ್ಯಾಯಾಲಯವೊಂದಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ಬಿಜೆಪಿ ವಕ್ತಾರ ನವೀನ್ ಕುಮಾರ್ ಜಿಂದಾಲ್ ಬುಧವಾರ ಹಿಂಪಡೆದಿದ್ದಾರೆ.

ದೆಹಲಿ ಬಿಜೆಪಿ ವಕ್ತಾರ ನವೀನ್ ಕುಮಾರ್ ಜಿಂದಾಲ್ ಅವರು ಅತ್ಯಾಚಾರಕ್ಕೊಳಗಾದ ಮೃತ ಮಹಿಳೆ ಮತ್ತು ಆಕೆಯ ಕುಟುಂಬದ ಸದಸ್ಯರ ಗುರುತನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ ಎಂದು ಆರೋಪಿಸಿ ಹೆಚ್ಚುವರಿ ಚೀಫ್‌ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಹಿಂಪಡೆದಿದ್ದಾರೆ.

ಸೂಕ್ತ ನ್ಯಾಯಾಲಯದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಜಿಂದಾಲ್‌ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಚೀಫ್‌ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಧರ್ಮೇಂದ್ರ ಸಿಂಗ್ ಅವರು ಅನುಮತಿಸಿದರು.

ದೆಹಲಿಯ ಸ್ಮಶಾನದಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ 9 ವರ್ಷದ ದಲಿತ ಬಾಲಕಿಯ ಗುರುತನ್ನು ಟ್ವಿಟರ್‌ನಲ್ಲಿ ಬಹಿರಂಗಪಡಿಸಿದ್ದಕ್ಕಾಗಿ ರಾಹುಲ್‌ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಇದೇ ರೀತಿಯ ಮತ್ತೊಂದು ಅರ್ಜಿಯನ್ನು ಮಕರಂದ್ ಸುರೇಶ್ ಮ್ಹಡ್ಲೇಕರ್ ಎಂಬುವವರು ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದರು. ಈ ಸಂಬಂಧ ದೆಹಲಿ ಹೈಕೋರ್ಟ್ ಸಾಮಾಜಿಕ ಜಾಲತಾಣ ಟ್ವಿಟರ್‌ಗೆ ನೋಟಿಸ್ ಜಾರಿ ಮಾಡಿತ್ತು.