Sharjeel Imam
Sharjeel Imam 
ಸುದ್ದಿಗಳು

ರಾಷ್ಟ್ರದ್ರೋಹ ಪ್ರಕರಣ: ಶಾರ್ಜೀಲ್‌ ಇಮಾಮ್‌ಗೆ ಜಾಮೀನು ಮಂಜೂರು ಮಾಡಿದ ದೆಹಲಿ ನ್ಯಾಯಾಲಯ

Bar & Bench

ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ರಾಷ್ಟ್ರದ್ರೋಹ ಪ್ರಕರಣ ಎದುರಿಸುತ್ತಿರಯವ ಜೆಎನ್‌ಯು ವಿದ್ಯಾರ್ಥಿ ನಾಯಕ ಶಾರ್ಜೀಲ್‌ ಇಮಾಮ್‌ ಅವರಿಗೆ ಶುಕ್ರವಾರ ದೆಹಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಐಪಿಸಿ ಸೆಕ್ಷನ್‌ 153ಎ ಅಡಿ ಅಪರಾಧಕ್ಕೆ ವಿಧಿಸಲಾಗುವ ಶಿಕ್ಷೆಯಲ್ಲಿ ಅರ್ಧದಷ್ಟು ಭಾಗವನ್ನು ಶಾರ್ಜೀಲ್‌ ಜೈಲಿನಲ್ಲಿ ಕಳೆದಿದ್ದಾರೆ. ಸುಪ್ರೀಂ ಕೋರ್ಟ್‌ ರಾಷ್ಟ್ರದ್ರೋಹವನ್ನು ಅಪರಾಧೀಕರಿಸುವ ಸೆಕ್ಷನ್‌ ಅನ್ನು ಅಮಾನತಿನಲ್ಲಿಟ್ಟಿರುವುದನ್ನು ಆಧರಿಸಿ ಹೆಚ್ಚುವರಿ ಸತ್ರ ನ್ಯಾಯಾಧೀಶರಾದ ಅನುಜ್‌ ಅಗರ್‌ವಾಲ್ ಜಾಮೀನು ಮಂಜೂರು ಮಾಡಿದ್ದಾರೆ.

ದೆಹಲಿ ಗಲಭೆಯ ಪಿತೂರಿ ಪ್ರಕರಣದಲ್ಲಿ ಆರೋಪಿಯಾಗಿರುವುದರಿಂದ ಶಾರ್ಜೀಲ್‌ ಇಮಾಮ್‌ ಅವರು ಜೈಲಿನಲ್ಲೇ ಉಳಿಯಲಿದ್ದಾರೆ. 2019ರಲ್ಲಿ ದೆಹಲಿಯ ಜಾಮಿಯಾ ನಗರದಲ್ಲಿನ ಗಲಭೆಗೆ ಇಮಾಮ್‌ ಭಾಷಣವೇ ಕಾರಣ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ದೆಹಲಿಯ ನ್ಯೂ ಫೆಂಡ್ಸ್‌ ಕಾಲೊನಿಯಲ್ಲಿ ರಾಷ್ಟ್ರದ್ರೋಹ ಪ್ರಕರಣ ದಾಖಲಾಗಿದೆ.

ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿನ ಆರೋಪಕ್ಕೆ ಸಂಬಂಧಿಸಿದ ಜಾಮೀನು ಅರ್ಜಿಯ ವಿಚಾರಣೆಯು ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.