Times Now and PFI
ಸುಳ್ಳು ವರದಿ ಮತ್ತು ಸದ್ಭಾವನೆಗೆ ಹಾನಿ ಉಂಟು ಮಾಡಿದ ಘಟನೆಗೆ ಸಂಬಂಧಿಸಿದಂತೆ ಇಸ್ಲಾಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹೂಡಿರುವ ಸಿವಿಲ್ ಮಾನನಷ್ಟ ಪ್ರಕರಣದಲ್ಲಿ ಇಂಗ್ಲಿಷ್ ಸುದ್ದಿ ವಾಹಿನಿ ಟೈಮ್ಸ್ ನೌಗೆ ದೆಹಲಿ ನ್ಯಾಯಾಲಯ ಸಮನ್ಸ್ ನೀಡಿದೆ. ಆಗ್ನೇಯ ಸಾಕೇತ್ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಚಿತ್ರಾಂಶಿ ಅರೋರಾ ಅವರು ನೋಟಿಸ್ ಜಾರಿಗೊಳಿಸಿ ಪ್ರಕರಣವನ್ನು ಮಾರ್ಚ್ 3 ಕ್ಕೆ ಮುಂದೂಡಿದರು. ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್ ಹತ್ಯೆಯಲ್ಲಿ ತನ್ನ ಪದಾಧಿಕಾರಿಗಳ ಕೈವಾಡವಿದೆ ಎಂದು ಸುದ್ದಿ ವಾಹಿನಿ ಸುಳ್ಳು ವರದಿ ಮಾಡಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಆರೋಪಿಸಿತ್ತು.
ಹೆಚ್ಚಿನ ವಿವರಗಳಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.