ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರು 5ಜಿ ತಂತ್ರಜ್ಞಾನ ಬಳಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ವಿಧಿಸಲಾಗಿದ್ದ ₹ 20 ಲಕ್ಷ ದಂಡವನ್ನು ₹ 2 ಲಕ್ಷಕ್ಕೆ ಇಳಿಸುವುದಾಗಿ ದೆಹಲಿ ಹೈಕೋರ್ಟ್ ಹೇಳಿದೆ. ಅದಕ್ಕೆ ಪ್ರತಿಯಾಗಿ ಚಾವ್ಲಾ ತಮ್ಮ ವರ್ಚಸ್ಸನ್ನು ಸಮಾಜದ ಒಳಿತಿಗೆ ಬಳಸಬಹುದಾಗಿದ್ದು ದೆಹಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕೆಲವು ಸಾರ್ವಜನಿಕ ಕಾರ್ಯಗಳಲ್ಲಿ ಅವರು ತೊಡಗಬೇಕಾಗುತ್ತದೆ ಎಂದು ನ್ಯಾ. ವಿಪಿನ್ ಸಾಂಘಿ ಮತ್ತು ಜಸ್ಮೀತ್ ಸಿಂಗ್ ಅವರಿದ್ದ ಪೀಠ ತಿಳಿಸಿದೆ. ಈ ಹಿಂದೆ ಅರ್ಜಿ ವಜಾಗೊಳಿಸಿ ₹ 20 ಲಕ್ಷ ದಂಡ ವಿಧಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಚಾವ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.