bike taxis and Delhi HC
bike taxis and Delhi HC 
ಸುದ್ದಿಗಳು

ರ‍್ಯಾಪಿಡೋ, ಉಬರ್ ರೀತಿಯ ಬೈಕ್ ಟ್ಯಾಕ್ಸಿ ಸೇವೆ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ದೆಹಲಿ ಹೈಕೋರ್ಟ್ ಆದೇಶ

Bar & Bench

ರ‍್ಯಾಪಿಡೊ ಮತ್ತು ಉಬರ್ ರೀತಿಯ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಅಗ್ರಿಗೇಟರ್‌ಗಳನ್ನು ನಿಯಂತ್ರಿಸುವ ಮಾರ್ಗಸೂಚಿ ಹೊರಬೀಳುವವರೆಗೆ ಅವುಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ದೆಹಲಿ ಹೈಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ.

ರ‍್ಯಾಪಿಡೋ ಸಲ್ಲಿಸಿದ ಅರ್ಜಿ ಹಿನ್ನೆಲೆಯಲ್ಲಿ  ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈತ್‌ ಮತ್ತು ನೀನಾ ಬನ್ಸಾಲ್ ಕೃಷ್ಣ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಉಬರ್‌ ಮನವಿಗೂ ನ್ಯಾಯಾಲಯ ಇದೇ ಬಗೆಯ ಆದೇಶ ನೀಡಿದೆ.

ರ‍್ಯಾಪಿಡೊವನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸುವ ವಕೀಲ ಪರಾಗ್ ಮೈನಿ ಅವರು ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. ಆದೇಶವು ಅವರಿಗೆ ಮಾತ್ರವಲ್ಲದೆ ಕಂಪನಿಯೊಂದಿಗೆ ಸಂಬಂಧ ಹೊಂದಿರುವ ಹಲವು ಬೈಕ್-ಟ್ಯಾಕ್ಸಿ ನಿರ್ವಾಹಕರಿಗೂ ದೊಡ್ಡ ಪರಿಹಾರವಾಗಲಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವುದಿಲ್ಲ. ಸಂಪೂರ್ಣವಾಗಿ ವಾಣಿಜ್ಯ ಕಾರ್ಯಾಚರಣೆಗಳಲ್ಲಿ ತೊಡಗಿರುವ ಸಾರಿಗೆಯೇತರ (ಖಾಸಗಿ) ನೋಂದಣಿ ಹೊಂದಿರುವ ದ್ವಿಚಕ್ರ ವಾಹನಗಳು ಮೋಟಾರು ವಾಹನ ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘಿಸುತ್ತವೆ ಎಂದು ಫೆಬ್ರವರಿಯಲ್ಲಿ ದೆಹಲಿ ಸರ್ಕಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿತ್ತು.