Bibhav Kumar and Delhi HC 
ಸುದ್ದಿಗಳು

ಮಾಲೀವಾಲ್‌ ಹಲ್ಲೆ ಪ್ರಕರಣ: ಬಂಧನ ಪ್ರಶ್ನಿಸಿ ಬಿಭವ್ ಕುಮಾರ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

Bar & Bench

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲೀವಾಲ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಬಿಭವ್‌ ಅವರಿಗೆ  ಪರಿಹಾರ ನೀಡಲು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು  ನಿರಾಕರಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಮಾಲೀವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್‌ ಕುಮಾರ್ ಅವರ ಮೇಲಿದೆ. ತನ್ನ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜೊತೆಗೆ ಪರಿಹಾರ ನೀಡಬೇಕೆಂದೂ ಕೋರಿದ್ದರು.

ತಮ್ಮ ಬಂಧನ ಕ್ರಮ ಅರ್ನೇಶ್ ಕುಮಾರ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ಘೋಷಿಸಬೇಕೆಂದು ಅವರು ಕೋರಿದ್ದರು.

ದೆಹಲಿ ಪೊಲೀಸರು ಮೇ 18 ರಂದು ಕುಮಾರ್ ಅವರನ್ನು ಬಂಧಿಸಿದ್ದರು. ನಂತರ ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಮೇ 24 ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದ ಕೇಜ್ರಿವಾಲ್‌ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಲು ಮಾಲೀವಾಲ್‌ ಮೇ 13 ರಂದು ಯತ್ನಿಸಿದ್ದರು. ಈ ವೇಳೆ ಬಿಭವ್‌ ಕುಮಾರ್‌ ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಮಾಲೀವಾಲ್‌ ಅವರು ದೂರು ನೀಡಿದ್ದರು.

ದೆಹಲಿ ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಕುಮಾರ್‌ಗೆ ಜಾಮೀನು ನಿರಾಕರಿಸಿದೆ. ಅವರ ಜಾಮೀನು ಅರ್ಜಿ ಈಗ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ.