ಸುದ್ದಿಗಳು

ನಟ ದಿಲೀಪ್‌ ಪ್ರಕರಣ: ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಕೋರಿದ ಸಂತ್ರಸ್ತೆ ನಟಿ

ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಹನಿ ಎಂ ವರ್ಗೀಸ್ ಅವರೆದುರು ಪ್ರಸ್ತುತ ಪ್ರಕರಣದ ವಿಚಾರಣೆ ನಡೆಯುತ್ತಿದೆ.

Bar & Bench

ನಟ ದಿಲೀಪ್‌ ಆರೋಪಿಯಾಗಿರುವ ಬಹುಭಾಷಾ ನಟಿಯೊಬ್ಬರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಉಳಿದ ವಿಚಾರಣೆಯನ್ನು ಮುಕ್ತ ನ್ಯಾಯಾಲಯದಲ್ಲಿ ನಡೆಸುವಂತೆ ಕೋರಿ ಸಂತ್ರಸ್ತೆ ನಟಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಹನಿ ಎಂ ವರ್ಗೀಸ್ ಅವರೆದುರು ಪ್ರಸ್ತುತ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಅಂತಿಮ ಹಂತಕ್ಕೆ ಬಂದಿರುವ ವಿಚಾರಣೆಯನ್ನು ಸಾರ್ವಜನಿಕರು ಇಲ್ಲವೇ ಮಾಧ್ಯಮಗಳ ಪ್ರವೇಶಕ್ಕೆ ಅವಕಾಶವಿಲ್ಲದೆ ಖಾಸಗಿಯಾಗಿ ನಡೆಸಲಾಗುತ್ತಿದ್ದು ಇದರ ಬದಲು ಮಾಧ್ಯಮಗಳು ಮತ್ತು ಸಾರ್ವಜನಿಕರೂ ಭಾಗಿಯಾಗಬಹುದಾದ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಆಕೆ ನ್ಯಾಯಾಲಯವನ್ನು ಕೋರಿದ್ದಾರೆ.

ದುಷ್ಕರ್ಮಿಗಳ ಗುಂಪೊಂದು 2017ರಲ್ಲಿ, ಮಲಯಾಳಂನ ಜನಪ್ರಿಯ ನಟಿಯೊಬ್ಬರನ್ನು ವಾಹನದಲ್ಲಿ ಅಪಹರಿಸಿ, ಲೈಂಗಿಕ ಕಿರುಕುಳ ನೀಡಿ ಅದನ್ನು ಚಿತ್ರೀಕರಿಸಿತ್ತು. ದಿಲೀಪ್ ವಿಚ್ಛೇದನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾದ ನಟಿಯ ಮೇಲೆ ಸೇಡು ತೀರಿಸಿಕೊಳ್ಳಲು ನಟ ದಾಳಿಗೆ ಸೂಚನೆ ನೀಡಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.