ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಪ್ರದರ್ಶನ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಕಡೆಗಳಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಇದರ ಭಾವಚಿತ್ರ ಪ್ರದರ್ಶನ ನಡೆಯಿತು.

Bar & Bench

ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಅಂಗವಾಗಿ ಬುಧವಾರ ಮಂಗಳೂರು ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಕುರಿತಾದ ಭಾವ ಚಿತ್ರ ಪ್ರದರ್ಶನವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಶಿ ಉದ್ಘಾಟಿಸಿದರು.

ಸುಪ್ರೀಂ ಕೋರ್ಟ್ ಸೂಚನೆಯಂತೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೇಶದಾದ್ಯಂತ ಅಕ್ಟೋಬರ್ 1ರಿಂದ ಅಕ್ಟೋಬರ್ 13ರ ವರೆಗೆ ಕಾನೂನು ಜಾಗೃತಿ ಮತ್ತು ಅರಿವು ಅಭಿಯಾನ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಕಡೆಗಳಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಇದರ ಭಾವಚಿತ್ರ ಪ್ರದರ್ಶನ ವೀಕ್ಷಿಸಿದ ನ್ಯಾಯಾಧೀಶ ಜೋಶಿ ಅವರು ಪ್ರಾಧಿಕಾರದ ಚಟುವಟಿಕೆಗಳನ್ನು ಶ್ಲಾಘಿಸಿದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ ರೈ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ. ಶೋಭಾ, ನಗರದ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ವಕೀಲರು ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಉಪಸ್ಥಿತರಿದ್ದರು. ಮಂಗಳೂರು ನ್ಯಾಯಾಲಯ ಸಂಕೀರ್ಣದ ಹಳೆ ಕೋರ್ಟ್ ಕಟ್ಟಡದಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು.