Doctors
Doctors 
ಸುದ್ದಿಗಳು

ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಜಾಮೀನು ರಹಿತ ಘೋರ ಅಪರಾಧ: ಕೇರಳ ಹೈಕೋರ್ಟ್

Bar & Bench

ಯಾವುದೇ ರೀತಿಯ ದೈಹಿಕ ಹಲ್ಲೆ ನಡೆಸದೆಯೂ ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಅದು ಕೇರಳ ಆರೋಗ್ಯ ಸೇವಾ ಸಿಬ್ಬಂದಿ ಮತ್ತು ಆರೋಗ್ಯ ಸೇವಾ ಸಂಸ್ಥೆಗಳ (ಹಿಂಸಾಚಾರ ಮತ್ತು ಆಸ್ತಿ ಹಾನಿ ತಡೆ) ಕಾಯಿದೆಯಡಿಯಲ್ಲಿ ಗಂಭೀರ ಜಾಮೀನು ರಹಿತ ಅಪರಾಧವಾಗುತ್ತದೆ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ಹೇಳಿದೆ [ಅರುಣ್ ಪಿ ಮತ್ತು ಕೇರಳ ಸರ್ಕಾರ ನಡುವಣ ಪ್ರಕರಣ].

ಆರೋಗ್ಯ ಸೇವೆ ಒದಗಿಸುವವರ ವಿರುದ್ಧದ ಎಲ್ಲಾ ರೀತಿಯ ಹಿಂಸಾಚಾರವನ್ನು ತಡೆಯುವುದು ಶಾಸನದ ಉದ್ದೇಶವಾಗಿದೆ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ತಿಳಿಸಿದರು.

ಕಾಯಿದೆಯಲ್ಲಿರುವ ಹಿಂಸೆ ಪದಕ್ಕೆ ಸಾಕಷ್ಟು ವ್ಯಾಪಕತೆ ಇದೆ. ಕಾಯಿದೆ ರೂಪಿಸಿರುವ ಶಾಸಕಾಂಗದ ಉದ್ದೇಶ ನಿಸ್ಸಂದೇಹವಾಗಿ ಆರೋಗ್ಯ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗೆ ಯಾವುದೇ ಬೆದರಿಕೆ ಅಥವಾ ಅಡ್ಡಿ ಉಂಟು ಮಾಡುವುದನ್ನು ತಡೆಯಬೇಕು ಎಂಬುದಾಗಿದೆ ಎಂದು ನ್ಯಾಯಾಲಯ ತಿಳಿಸಿತು.

ವೈದ್ಯೆಯೊಬ್ಬರಿಗೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆರೋಪಿಯೊಬ್ಬರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದ್ದು ಅರ್ಜಿದಾರರಿಗೆ ಜಾಮೀನು ನಿರಾಕರಿಸಿತು.