Farmers Protest and Parliament 
ಸುದ್ದಿಗಳು

ಪ್ರತಿಭಟನೆ ವೇಳೆ ಸಾವನ್ನಪ್ಪಿದ ರೈತರ ಬಗ್ಗೆ ದಾಖಲೆ ಇಲ್ಲ ಹೀಗಾಗಿ ಪರಿಹಾರ ಇಲ್ಲ: ಸಂಸತ್ತಿಗೆ ಕೇಂದ್ರದ ಪ್ರತಿಕ್ರಿಯೆ

ರೈತರ ಸಾವಿನ ಬಗ್ಗೆ ಮತ್ತು ಅಂತಹ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ಉದ್ದೇಶಿಸಿದೆಯೇ ಎಂಬ ಪ್ರಶ್ನೆಗೆ ಕೇಂದ್ರ ಪ್ರತಿಕ್ರಿಯಿಸಿತು.

Bar & Bench

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಸಾವಿಗೀಡಾಗಿದ್ದರ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸಂಸತ್ತಿಗೆ ತಿಳಿಸಿದೆ. ಹಾಗಾಗಿ ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ರೈತರ ಸಾವಿನ ಬಗ್ಗೆ ಮತ್ತು ಅಂತಹ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ಉದ್ದೇಶಿಸಿದೆಯೇ ಎಂಬ ಪ್ರಶ್ನೆಗೆ ಕೇಂದ್ರ ಪ್ರತಿಕ್ರಿಯಿಸಿತು.

ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ನಿರ್ಧರಿಸಿದ್ದರೂ, ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಕೃಷಿಕರು ಹೇಳಿದ್ದಾರೆ.

ರೈತ ಸಂಘಟನೆಗಳ ಪ್ರಕಾರ, ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು 700 ರೈತರು ಸಾವನ್ನಪ್ಪಿದ್ದಾರೆ.