ಸುದ್ದಿಗಳು

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಸುಪೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇಮಕ

ಬಾಂಬೆ ಹೈಕೋರ್ಟ್‌ನಿಂದ ಪದೋನ್ನತಿ ಪಡೆದಿದ್ದ ನ್ಯಾ. ರಂಜನಾ ಸೆಪ್ಟೆಂಬರ್ 2011ರಿಂದ ಅಕ್ಟೋಬರ್ 2014ರ ನಡುವೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

Bar & Bench

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರನ್ನು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನೇಮಿಸಲಾಗಿದೆ.

ಬಾಂಬೆ ಹೈಕೋರ್ಟ್‌ನಿಂದ ಪದೋನ್ನತಿ ಪಡೆದಿದ್ದ ನ್ಯಾ. ರಂಜನಾ ಸೆಪ್ಟೆಂಬರ್ 2011ರಿಂದ ಅಕ್ಟೋಬರ್ 2014ರ ನಡುವೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ನ್ಯಾ. ರಂಜನಾ ಅವರು ಮುಂಬೈನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಪದವಿ ಪಡೆದವರು. 1973ರಲ್ಲಿ ವಕೀಲ ವೃತ್ತಿ ಆರಂಭಿಸಿದ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್‌ ಮಾಡಿದರು. ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದು 1996ರಲ್ಲಿ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಸೆಪ್ಟೆಂಬರ್ 13, 2011ರಂದು ಅವರು ಪದೋನ್ನತಿ ಪಡೆದರು.

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ನ್ಯಾ. ರಂಜನಾ ನೇತೃತ್ವದ ಐವರು ಸದಸ್ಯರ ಸಮಿತಿಯನ್ನು ಇತ್ತೀಚೆಗೆ ಉತ್ತರಾಖಂಡ ಸರ್ಕಾರ ನೇಮಿಸಿದೆ.