Election
Election 
ಸುದ್ದಿಗಳು

ಚುನಾವಣಾ ಆಯುಕ್ತರ ನೇಮಕಾತಿ ಮಸೂದೆ; ಆಯ್ಕೆ ಸಮಿತಿಯಲ್ಲಿ ಇಲ್ಲ ಸಿಜೆಐ

Bar & Bench

ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸೇವಾ ಷರತ್ತುಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಇಂದು ಮಸೂದೆ ಮಂಡಿಸಲಿದೆ.

ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ಸೇವಾ ನಿಯಮಾವಳಿ ಮತ್ತು ಅಧಿಕಾಕಾರಾವಧಿ) ಮಸೂದೆ- 2023ನ್ನು ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಮಂಡಿಸಲಿದ್ದಾರೆ.

ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಲ್ಲಿನ ನಿರ್ವಾತವನ್ನು ಗಮನಿಸಿ ಸುಪ್ರೀಂ ಕೋರ್ಟ್‌ ಈಚೆಗೆ ನೀಡಿದ್ದ ತೀರ್ಪಿನ ಹಿನ್ನೆಲೆಯಲ್ಲಿ ಈ ಮಸೂದೆ ಜಾರಿಗೆ ತರಲಾಗಿದೆ.   

ಪ್ರಧಾನಿ ಅಧ್ಯಕ್ಷತೆಯಲ್ಲಿ, ಕೇಂದ್ರದ ಒಬ್ಬ ಸಂಪುಟ ದರ್ಜೆ ಸಚಿವ, ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಸಮಿತಿ ಒಳಗೊಂಡಿರುತ್ತದೆ ಎಂದು ಮಸೂದೆ ವಿವರಿಸಿದೆ.

ಕೇಂದ್ರ ಸರ್ಕಾರವು ಇಸಿಐಗೆ ನೇಮಕಾತಿಗಳ ಕುರಿತು ಕಾನೂನು ರೂಪಿಸುವವರೆಗೆ, ಪ್ರಧಾನಿ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನೊಳಗೊಂಡ ಸಮಿತಿಯ ಸಲಹೆಯ ಮೇರೆಗೆ ನೇಮಕಾತಿಗಳನ್ನು ಮಾಡಬೇಕು ಎಂದು ಮಾರ್ಚ್ 2, 2023ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ತಿಳಿಸಲಾಗಿತ್ತು.

ಇಸಿಐಗೆ ಶಾಶ್ವತ ಸಚಿವಾಲಯವೊಂದನ್ನು ಸ್ಥಾಪಿಸಿ ಅದಕ್ಕೆ ತಗಲುವ ವೆಚ್ಚವನ್ನು ಭಾರತದ ಸಂಚಿತ ನಿಧಿಯಿಂದ ಭರಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಹಾಗೂ ಸಿಟಿ ರವಿಕುಮಾರ್ ಅವರಿದ್ದ ಸಾಂವಿಧಾನಿಕ ಪೀಠ ತಿಳಿಸಿತ್ತು.

ನಿಯಮದಂತೆ ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ಖಾತ್ರಿಪಡಿಸದ ಚುನಾವಣಾ ಆಯೋಗ, ಕಾನೂನು ಆಳ್ವಿಕೆಯ ಅಡಿಪಾಯವನ್ನು ಅಲುಗಾಡಿಸುವುದು ಖಚಿತ ಎಂದು ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ ಕುಟುಕಿತ್ತು.