ಸುದ್ದಿಗಳು

ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು

ಹೈಕೋರ್ಟ್ ನ್ಯಾಯಮೂರ್ತಿ ಗಳ ಸಂಖ್ಯೆ ಈಗ 57ಕ್ಕೆ ಏರಿದಂತಾಗಿದೆ. ಒಟ್ಟು ಮಂಜೂರಾತಿ ಸಂಖ್ಯೆ 62.

Bar & Bench

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಆರು ಜನ ವಕೀಲರು ಭಾನುವಾರ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು. ರಾಘವೇಂದ್ರ ಸೀತಾರಾಂ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿಭೂಷಣ್ ಅವರು ನೂತನವಾಗಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇದ್ದರು‌.

ಹೈಕೋರ್ಟ್ ನ್ಯಾಯಮೂರ್ತಿ ಗಳ ಸಂಖ್ಯೆ ಈಗ 57ಕ್ಕೆ ಏರಿದಂತಾಗಿದೆ. ಒಟ್ಟು ಮಂಜೂರಾತಿ ಸಂಖ್ಯೆ 62.