Gyanvapi mosque, the Kashi Vishwanath temple and Supreme Court 
ಸುದ್ದಿಗಳು

ಜ್ಞಾನವಾಪಿ ಪ್ರಕರಣ: ಎಎಸ್ಐ ಸಮೀಕ್ಷೆಗೆ ಅನುಮತಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಮುಸ್ಲಿಂ ಪಕ್ಷಕಾರರು

ನ್ಯಾಯದ ಹಿತದೃಷ್ಟಿಯಿಂದ ವೈಜ್ಞಾನಿಕ ಸಮೀಕ್ಷೆ ಮುಖ್ಯ ಎಂದು ಅಲಾಹಾಬಾದ್ ಹೈಕೋರ್ಟ್ ಗುರುವಾರ ಬೆಳಿಗ್ಗೆ ಆದೇಶ ನೀಡಿತ್ತು.

Bar & Bench

ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಅವಕಾಶ ನೀಡಿರುವ ಅಲಾಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಸ್ಲಿಂ ಪಕ್ಷಕಾರರು ಗುರುವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅಂಜುಮನ್ ಇಂತೆಜಾಮಿಯಾ ಮಸ್ಜಿದ್‌ ಸಲ್ಲಿಸಿರುವ ಮನವಿಯ  ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಅವರಿದ್ದ ಪೀಠದೆದುರು ಪ್ರಸ್ತಾಪಿಸಲಾಯಿತು.

ನ್ಯಾಯದ ಹಿತದೃಷ್ಟಿಯಿಂದ ವೈಜ್ಞಾನಿಕ ಸಮೀಕ್ಷೆ ಮುಖ್ಯ ಎಂದು ಅಲಹಾಬಾದ್ ಹೈಕೋರ್ಟ್ ಇಂದು ಬೆಳಗ್ಗೆ (ಗುರುವಾರ) ಆದೇಶ ನೀಡಿತ್ತು. ಸಮೀಕ್ಷೆಯಿಂದ ಹಿಂದೂ ಮತ್ತು ಮುಸ್ಲಿಂ ಎರಡೂ ಪಕ್ಷಕಾರರಿಗೆ ಅನುಕೂಲವಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ತೀರ್ಪು ನೀಡಿದ್ದರು.

ಆದ್ದರಿಂದ ಎಎಸ್‌ಐ ಸಮೀಕ್ಷೆಗಾಗಿ ವಾರಾಣಸಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮುಸ್ಲಿಂ ಪಕ್ಷಕಾರರು ಸಲ್ಲಿಸಿದ್ದ ಮನವಿಯನ್ನು ಅದು ವಜಾಗೊಳಿಸಿತ್ತು.