Gyanvapi and Supreme Court
Gyanvapi and Supreme Court 
ಸುದ್ದಿಗಳು

ಜ್ಞಾನವಾಪಿ-ಕಾಶಿ ವಿಶ್ವನಾಥ ಪ್ರಕರಣ: ಸರ್ವೇ ವೇಳೆ ಪತ್ತೆಯಾದ ಶಿವಲಿಂಗ ರಕ್ಷಣೆ; ಮಧ್ಯಂತರ ಆದೇಶ ವಿಸ್ತರಿಸಿದ ಸುಪ್ರೀಂ

Bar & Bench

ವಾರಾಣಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆ ವೇಳೆ ಪತ್ತೆಯಾಗಿದೆ ಎನ್ನಲಾದ ಶಿವಲಿಂಗದ ರೂಪದ ವಸ್ತುವನ್ನು ರಕ್ಷಿಸುವುದಕ್ಕೆ ಸಂಬಂಧಿಸಿದಂತೆ ಮೇ 17ರಂದು ಮಾಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಿಸ್ತರಿಸಿದೆ.

ಹಿಂದೂ ಪಕ್ಷಕಾರರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಪಿ ಎಸ್‌ ನರಸಿಂಹ ಅವರ ನೇತೃತ್ವದ ತ್ರಿಸದಸ್ಯ ಪೀಠವು ಮಾನ್ಯ ಮಾಡಿದೆ.

“ಮುಂದಿನ ಆದೇಶಕ್ಕಾಗಿ ಬಾಕಿ ಇರುವ ಹಿನ್ನೆಲೆಯಲ್ಲಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 17ರಂದು ಮಾಡಿರುವ ಮಧ್ಯಂತರ ಆದೇಶವು ವಿಸ್ತರಣೆಯಾಗಲಿದೆ” ಎಂದು ಪೀಠ ಹೇಳಿದೆ.

ಮಸೀದಿಯ ಸರ್ವೆ ಸಂದರ್ಭದಲ್ಲಿ ಪತ್ತೆ ಮಾಡಲಾದ ವಸ್ತುವನ್ನು ರಕ್ಷಿಸಬೇಕು ಎಂದು ಮೇ 17ರಂದು ಸರ್ವೋಚ್ಚ ನ್ಯಾಯಾಲಯ ಆದೇಶ ಮಾಡಿತ್ತು. ಈ ಆದೇಶದ ಗಡುವು ನವೆಂಬರ್‌ 17ರಂದು ಮುಕ್ತಾಯವಾಗುತ್ತಿದ್ದ ಹಿನ್ನೆಲೆಯಲ್ಲಿ ಹಿಂದೂ ಪಕ್ಷಕಾರರು ಆದೇಶ ವಿಸ್ತರಣೆ ಕೋರಿ ಅರ್ಜಿ ಸಲ್ಲಿಸಿದ್ದರು.

ಜ್ಞಾನವಾಪಿ ಮಸೀದಿಯ ಆವರಣದ ಸಮೀಕ್ಷೆಯ ವೇಳೆ ಕಂಡುಬಂದ ವಸ್ತು ಶಿವಲಿಂಗವೋ ಅಥವಾ ಕಾರಂಜಿಯೋ ಎಂಬ ಕುರಿತು ವೈಜ್ಞಾನಿಕ ತನಿಖೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ನಿರ್ದೇಶನ ನೀಡಬೇಕೆಂದು ಕೋರಿ ಹಿಂದೂ ಪಕ್ಷಕಾರರು ಸಲ್ಲಿಸಿದ್ದ ಮನವಿಯನ್ನು ವಾರಾಣಸಿ ನ್ಯಾಯಾಲಯ ತಿರಸ್ಕರಿಸಿತ್ತು.