Karnataka HC and election 
ಸುದ್ದಿಗಳು

ಜಿ.ಪಂ, ತಾ.ಪಂ ಚುನಾವಣೆ: ಒಂದು ತಿಂಗಳು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಸಮಯಾಭಾವದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅರ್ಜಿ ವಿಚಾರಣೆ ನಡೆಸಲಾಗಲಿಲ್ಲ. ಹೀಗಾಗಿ, ವಿಚಾರಣೆ ಮುಂದೂಡಲಾಯಿತು.

Bar & Bench

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಮೀಸಲಾತಿ ಅಂತಿಮಗೊಳಿಸುವ ಪ್ರಕ್ರಿಯೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಮತ್ತೆ ಒಂದು ತಿಂಗಳು ಮುಂದೂಡಿದೆ.

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದ್ದವು. ಆದರೆ, ಸಮಯಾಭಾವದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಯಲಿಲ್ಲ.

“ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ, ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶ ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗವು 2023ರಲ್ಲಿ ಈ ಅರ್ಜಿ ಸಲ್ಲಿಸಿದೆ.