Rashtrapati Bhavan 
ಸುದ್ದಿಗಳು

ನೂತನ ಸಿಜೆಐ ಗವಾಯಿ ಅವರಿಗೆ ರಾಷ್ಟ್ರಪತಿ ಮುರ್ಮು ಅವರಿಂದ ಔತಣಕೂಟ

ನ್ಯಾ. ಬಿ ಆರ್‌ ಗವಾಯಿ ಅವರು ಮೇ 24, 2019 ರಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು. ಮೇ 14, 2025 ರಂದು ಮಾಜಿ ಸಿಜೆಐ ಸಂಜೀವ್ ಖನ್ನಾ ಅವರ ನಿವೃತ್ತಿಯ ನಂತರ ಸಿಜೆಐ ಆಗಿ ನೇಮಕಗೊಂಡಿದ್ದಾರೆ.

Bar & Bench

ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಗೌರವಾರ್ಥವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಸೋಮವಾರ ರಾತ್ರಿ ಔತಣ ಕೂಟ ಆಯೋಜಿಸಿದ್ದರು.

Rashtrapati Bhavan

ಔತಣ ಕೂಟದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್‌, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್, ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಅರ್ಜುನ್ ರಾಮ್ ಮೇಘವಾಲ್, ಮಾಜಿ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ, ಸುಪ್ರೀಂ ಕೋರ್ಟ್‌ನ ಹಲವಾರು ನ್ಯಾಯಾಧೀಶರು, ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಮತ್ತು ಇತರ ಗಣ್ಯ ಅತಿಥಿಗಳು ಭಾಗವಹಿಸಿದ್ದರು.

Rashtrapati Bhavan

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಔತಣಕೂಟವನ್ನು ಆಯೋಜಿಸಲಾಗಿತ್ತು. ಔತಣಕೂಟದ ಕೆಲವು ಛಾಯಾಚಿತ್ರಗಳೊಂದಿಗೆ ಕಾರ್ಯಕ್ರಮದ ವಿವರಗಳನ್ನು ರಾಷ್ಟ್ರಪತಿ ಭವನದ ಅಧಿಕೃತ 'ಎಕ್ಸ್' ಹ್ಯಾಂಡಲ್ ಮೂಲಕ ರಾಷ್ಟ್ರಪತಿ ಮುರ್ಮು ಅವರು ಹಂಚಿಕೊಂಡಿದ್ದಾರೆ.

ನ್ಯಾ. ಗವಾಯಿ ಅವರು ಮೇ 24, 2019 ರಂದು ಸುಪ್ರೀಂ ಕೋರ್ಟ್‌ಗೆ ಬಡ್ತಿ ಪಡೆದರು. ಮೇ 14, 2025 ರಂದು ಮಾಜಿ ಸಿಜೆಐ ಸಂಜೀವ್ ಖನ್ನಾ ಅವರ ನಿವೃತ್ತಿಯ ನಂತರ ಸಿಜೆಐ ಆಗಿ ನೇಮಕಗೊಂಡಿದ್ದಾರೆ.