ವಕೀಲರು ಮತ್ತು ದಾವೆದಾರರಿಗೆ ನ್ಯಾಯಾಲಯದಲ್ಲಿ ಪ್ರಕರಣ ನಡೆಸುವುದು ಒತ್ತಡ ರಹಿತ ಕ್ರಿಯೆಯಾಗುವಂತೆ ಮಾಡಲು ಯತ್ನಿಸುವುದಾಗಿ ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಬುಧವಾರ ಹೇಳಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಷ್ಟ್ರಪತಿ ಭವನದಲ್ಲಿ ಸರ್ವೋಚ್ಚ ನ್ಯಾಯಾಲಯದ 50ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್‌ಗೆ ಆಗಮಿಸಿದ ಅವರು ನ್ಯಾಯಾಲಯದ ಕಲಾಪದ ಆರಂಭದ ವೇಳೆ ಕಿಕ್ಕಿರಿದಿದ್ದ ವಕೀಲ ಸಮುದಾಯವನ್ನು ಉದ್ದೇಶಿಸಿ ಈ ಮಾತುಗಳನ್ನು ಹೇಳಿದರು.
ಬಳಿಕ ವಕೀಲರು ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಮುಂದಿನ ಎರಡು ವರ್ಷಗಳ ಕಾಲ ಚಂದ್ರಚೂಡ್ ಅವರು ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದಾರೆ.