ಕ್ರಿಮಿನಲ್ ಕಾನೂನುಗಳು
ಕ್ರಿಮಿನಲ್ ಕಾನೂನುಗಳು 
ಸುದ್ದಿಗಳು

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ

Bar & Bench

ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಪರಿಚಯಿಸಲಾಗಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷರತಾ ಅಧಿನಿಯಮ ಈ ವರ್ಷದ ಜುಲೈ 1 ರಿಂದ ಜಾರಿಗೆ ಬರಲಿವೆ.

ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ವಾಹನದ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಸಾವು ಸಂಭವಿಸಿದರೆ ಹತ್ತು ವರ್ಷಗಳ ಗರಿಷ್ಠ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಲು ಮುಂದಾಗಿದ್ದ ಬಿಎನ್ಎಸ್‌ನ ಸೆಕ್ಷನ್ 106ರ ಉಪ ಸೆಕ್ಷನ್ (2) ಅನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಈ ಸೆಕ್ಷನ್‌ ವಿರುದ್ಧ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು.

ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಮೂರು ಮಸೂದೆಗಳಿಗೆ 2023ರ ಡಿಸೆಂಬರ್‌ನಲ್ಲಿ ಭಾರತದ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು.

ಈ ಮೂರು ಕಾನೂನುಗಳನ್ನು ಮೊದಲು ಆಗಸ್ಟ್ 11, 2023 ರಂದು ಲೋಕಸಭೆಯಲ್ಲಿ ಮಂಡಿಸಲಾಗಿತ್ತು.  ಅವುಗಳನ್ನು ಡಿಸೆಂಬರ್ 20ರಂದು ಲೋಕಸಭೆ ಹಾಗೂ ಡಿಸೆಂಬರ್ 21ರಂದು ರಾಜ್ಯಸಭೆ ಕ್ರಮವಾಗಿ ಅಂಗೀಕರಿಸಿದ್ದವು.

[ಕಾನೂನಿನ ಪ್ರತಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ]

THE_BHARATIYA_NYAYA__SECOND__SANHITA__2023.pdf
Preview
THE_BHARATIYA_NAGARIK_SURAKSHA__SECOND__SANHITA__2023.pdf
Preview
THE_BHARATIYA_SAKSHYA__SECOND__BILL__2023.pdf
Preview