ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿಲಯ್‌ ವಿಪಿನ್‌ಚಂದ್ರ ಅಂಜಾರಿಯಾ.
ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿಲಯ್‌ ವಿಪಿನ್‌ಚಂದ್ರ ಅಂಜಾರಿಯಾ.  
ಸುದ್ದಿಗಳು

ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

Bar & Bench

ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್‌ ವಿಪಿನ್‌ಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರಿನ ರಾಜಭವನದ ಗಾಜಿನಮನೆಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಸಿಜೆ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನ್ಯಾ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಫೆ. 16ರಂದು ಅಧಿಸೂಚನೆ ಹೊರಡಿಸಿತ್ತು.

ಸುಪ್ರೀಂ ಕೋರ್ಟ್ ಕೊಲಿಜಿಯಂ ಫೆಬ್ರವರಿ 7ರಂದು ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಿತ್ತು.

ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ್ದ ಪಿ ಎಸ್ ದಿನೇಶ್ ಕುಮಾರ್ ಅವರು ಫೆಬ್ರವರಿ 24ರಂದು ನಿವೃತ್ತರಾಗಿದ್ದರು.

2011ರ ನವೆಂಬರ್ 21ರಂದು ನ್ಯಾ. ಅಂಜಾರಿಯಾ ಅವರು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಪದೋನ್ನತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್‌ನಲ್ಲಿ ಸಿವಿಲ್, ಸಾಂವಿಧಾನಿಕ ವಿಷಯ, ಕಂಪೆನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಅವರು ಪ್ರಾಕ್ಟೀಸ್‌ ಮಾಡುತ್ತಿದ್ದರು.