ಸುದ್ದಿಗಳು

ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ನ್ಯಾಯಾಂಗ ಸದಸ್ಯರಾಗಿ ನ್ಯಾ. ಪ್ರಭಾಕರ ಶಾಸ್ತ್ರಿ ನೇಮಕ

‘ನ್ಯಾ. ಶಾಸ್ತ್ರಿ ಅಧಿಕಾರ ವಹಿಸಿಕೊಳ್ಳುವ ದಿನದಿಂದ ನಾಲ್ಕು ವರ್ಷಗಳವರೆಗೆ ಅವರ ಅವಧಿ ಇರುತ್ತದೆ’ ಎಂದು ಹೇಳಲಾಗಿದೆ.

Bar & Bench

ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ (ಕೆಎಸ್‌ಎಟಿ) ನ್ಯಾಯಾಂಗ ಸದಸ್ಯರನ್ನಾಗಿ, ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಡಾ. ಎಚ್‌ ಬಿ ಪ್ರಭಾಕರ ಶಾಸ್ತ್ರಿ ಅವರನ್ನು ನೇಮಕ ಮಾಡಲಾಗಿದೆ.

‘ಈ ನೇಮಕ ನ್ಯಾ. ಶಾಸ್ತ್ರಿ ಅಧಿಕಾರ ವಹಿಸಿಕೊಳ್ಳುವ ದಿನದಿಂದ ನಾಲ್ಕು ವರ್ಷಗಳವರೆಗೆ ಇರುತ್ತದೆ’ ಎಂದು ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿಗಳ ಸಚಿವಾಲಯ 2025ರ ಆಗಸ್ಟ್‌ 29ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

Justice H. B. Prabhakara Sastry.pdf
Preview