ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಸೂರ್ಯಕಾಂತ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳು, ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಭೂತಾನ್, ಕೀನ್ಯಾ, ಮಲೇಷ್ಯಾ, ಬ್ರೆಜಿಲ್, ಮಾರಿಷಸ್, ನೇಪಾಳ ಮತ್ತು ಶ್ರೀಲಂಕಾದ ನ್ಯಾಯಮೂರ್ತಿಗಳು ಭಾಗವಹಿಸಿದ್ದರು.
ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಮೇ 24, 2019 ರಂದು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ನೀಡಲಾಯಿತು.
ಸುಪ್ರೀಂ ಕೋರ್ಟ್‌ನಲ್ಲಿ ಅವರ ಅಧಿಕಾರಾವಧಿ ಫೆಬ್ರವರಿ 9, 2027 ರವರೆಗೆ ಇರಲಿದ್ದು ಅವರು 14 ತಿಂಗಳಿಗೂ ಹೆಚ್ಚು ಕಾಲ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.