CJ Gangapurwala and Governor RN Ravi 
ಸುದ್ದಿಗಳು

ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್ ವಿ ಗಂಗಾಪುರವಾಲಾ ಪ್ರಮಾಣ ವಚನ ಸ್ವೀಕಾರ

ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಂ ಎನ್ ಭಂಡಾರಿ ಅವರು ನಿವೃತ್ತರಾದಾಗಿನಿಂದ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿಯಾಗಿದ್ದವರೇ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿದ್ದರು.

Bar & Bench

ಮದ್ರಾಸ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸಂಜಯ್ ವಿಜಯಕುಮಾರ್ ಗಂಗಾಪುರವಾಲಾ ಅಧಿಕಾರ ಸ್ವೀಕರಿಸಿದ್ದಾರೆ.

ಚೆನ್ನೈನ ರಾಜಭವನದಲ್ಲಿ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ನ್ಯಾಯಮೂರ್ತಿ ಗಂಗಾಪುರವಾಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸಿನ ನಂತರ, ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್‌ವಿ ಗಂಗಾಪುರವಾಲಾ ಅವರನ್ನು ನೇಮಕ ಮಾಡಲು ರಾಷ್ಟ್ರಪತಿಗಳು ಒಪ್ಪಿಗೆ ಸೂಚಿಸಿದ್ದರು ಕೇಂದ್ರ ಕಾನೂನು ಸಚಿವಾಲಯ ಈ ಸಂಬಂಧ ಶುಕ್ರವಾರ ಅಧಿಸೂಚನೆ ಹೊರಡಿಸಿತ್ತು.

ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಎಂ ಎನ್‌ ಭಂಡಾರಿ ಅವರು ನಿವೃತ್ತರಾದಾಗಿನಿಂದ ಅಲ್ಲಿ ಖಾಯಂ ಮುಖ್ಯ ನ್ಯಾಯಮೂರ್ತಿಗಳಿರಲಿಲ್ಲ. ಕಳೆದ ಎಂಟು ತಿಂಗಳುಗಳಿಂದ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಯಾಗಿದ್ದವರೇ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿದ್ದರು.

ನ್ಯಾ. ಗಂಗಾಪುರವಾಲಾ ಅವರು 2010ರಲ್ಲಿ ಬಾಂಬೆ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು ಕಳೆದ ವರ್ಷದಿಂದ ಅದೇ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.