Swearing in ceremony  
ಸುದ್ದಿಗಳು

ಸುಪ್ರೀಂ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಎನ್‌ ವಿ ಅಂಜಾರಿಯಾ, ವಿಜಯ್‌ ಬಿಷ್ಣೋಯ್‌, ಅತುಲ್‌ ಚಂದೂರ್ಕರ್‌

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

Bar & Bench

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎನ್‌ ವಿ ಅಂಜಾರಿಯಾ, ವಿಜಯ್‌ ಬಿಷ್ಣೋಯ್‌ ಮತ್ತು ಅತುಲ್‌ ಎಸ್‌ ಚಂದೂರ್ಕರ್‌ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರು ಪ್ರಮಾಣ ವಚನ ಬೋಧಿಸಿದರು. ನ್ಯಾಯಮೂರ್ತಿಗಳಾದ ಅಂಜಾರಿಯಾ, ಬಿಷ್ಣೋಯ್‌ ಮತ್ತು ಚಂದೂರ್ಕರ್‌ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿದ ಬೆನ್ನಿಗೇ ಪ್ರಮಾಣ ವಚನ ಕಾರ್ಯಕ್ರಮ ಆಯೋಜಿಸಲಾಗಿತ್ತು.

Justice Anjaria being sworn in as a Supreme Court judge

ನ್ಯಾ. ಬಿಷ್ಣೋಯ್‌ ಅವರು ಹಿಂದಿಯಲ್ಲಿ, ನ್ಯಾಯಮೂರ್ತಿಗಳಾದ ಅಂಜಾರಿಯಾ ಮತ್ತು ಚಂದೂರ್ಕರ್‌ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮೂವರು ನ್ಯಾಯಮೂರ್ತಿಗಳ ನೇಮಕಾತಿಯೊಂದಿಗೆ ಸುಪ್ರೀಂ ಕೋರ್ಟ್‌ನ 34 ನ್ಯಾಯಮೂರ್ತಿಗಳು ಭರ್ತಿಯಾದಂತಾಗಿದೆ.

ಸಿಜೆಐ ಬಿ ಆರ್‌ ಗವಾಯಿ ಅವರ ನೇತೃತ್ವದ ಕೊಲಿಜಿಯಂ ಮೇ 26ರಂದು ಮೂವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಶಿಫಾರಸ್ಸು ಮಾಡಿತ್ತು.