Kerala High Court
Kerala High Court 
ಸುದ್ದಿಗಳು

ಪ್ರಚೋದನಕಾರಿ ಉಡುಗೆ ತೀರ್ಪು: ಸೆಷನ್ಸ್ ನ್ಯಾಯಾಧೀಶರ ವರ್ಗಾವಣೆ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ

Bar & Bench

ಕೋರಿಕ್ಕೋಡ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್ ಕೃಷ್ಣಕುಮಾರ್ ಅವರನ್ನು ಕೊಲ್ಲಂನ ಕಾರ್ಮಿಕ ನ್ಯಾಯಾಲಯಕ್ಕೆ ವರ್ಗಾಯಿಸಿ ಏಕಸದಸ್ಯ ಪೀಠ ನೀಡಿದ್ದ  ಆದೇಶಕ್ಕೆ ಕೇರಳ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ [ಎಸ್ ಕೃಷ್ಣಕುಮಾರ್ ಮತ್ತು ಕೇರಳ  ಸರ್ಕಾರ ನಡುವಣ ಪ್ರಕರಣ].

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆ ಪ್ರಚೋದನಕಾರಿ ಉಡುಗೆ ಧರಿಸಿದ್ದರೆ ಆ ಪ್ರಕರಣ ಮೇಲ್ನೋಟಕ್ಕೆ ನಿಲ್ಲುವುದಿಲ್ಲ ಎಂದು ಆಗಸ್ಟ್‌ನಲ್ಲಿ ಅವರು ನೀಡಿದ್ದ ಆದೇಶ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಅದರ ಬೆನ್ನಲ್ಲೇ ಅವರ ವರ್ಗಾವಣೆ ನಡೆದಿತ್ತು.

ತಮ್ಮನ್ನು ವರ್ಗಾವಣೆ ಮಾಡಿದ್ದ ಆದೇಶ  ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ನ್ಯಾಯಾಧೀಶ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ ಕೆ ಜಯಶಂಕರನ್ ನಂಬಿಯಾರ್ ಮತ್ತು ಮೊಹಮ್ಮದ್ ನಿಯಾಸ್ ಸಿ ಪಿ ಅವರಿದ್ದ ವಿಭಾಗೀಯ ಪೀಠ ವರ್ಗಾವಣೆ ಆದೇಶಕ್ಕೆ ತಡೆ ನೀಡಿದೆ.

ವರ್ಗಾವಣೆ ಆದೇಶ ಕಾನೂನುಬಾಹಿರ, ಅನಿಯಂತ್ರಿತ ಹಾಗೂ ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಕೃಷ್ಣಕುಮಾರ್ ಅವರು ಹೈಕೋರ್ಟ್‌ ಏಕಸದಸ್ಯ ಪೀಠಕ್ಕೆ ಸಲ್ಲಿಸಿದ್ದ ಮನವಿಯಲ್ಲಿ ವಾದಿಸಿದ್ದರು. ಆದರೆ ಮನವಿಯನ್ನು ಪೀಠ ತಿರಸ್ಕರಿಸಿತ್ತು.