ಸುದ್ದಿಗಳು

ಸುಪ್ರೀಂ ಕೋರ್ಟ್‌ ವಿಶೇಷ ಕರ್ತವ್ಯಾಧಿಕಾರಿಯಾಗಿ ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ನ್ಯಾ. ಶಶಿಧರ ಶೆಟ್ಟಿ ನೇಮಕ

ಒಂದು ವರ್ಷದ ಅವಧಿಗೆ ಸುಪ್ರೀಂ ಕೋರ್ಟ್‌ಗೆ ವಿಶೇಷ ಕರ್ತವ್ಯಾಧಿಕಾರಿಯಾಗಿ ಶಶಿಧರ ಶೆಟ್ಟಿ ಅವರನ್ನು ನೇಮಕ ಮಾಡಲು ಪರಿಗಣಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಹಂಗಾಮಿ ಸಿಜೆ ಅಲೋಕ್‌ ಅರಾಧೆ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Bar & Bench

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್‌ ಅವರ ನಿರ್ದೇಶನದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಎಚ್‌ ಶಶಿಧರ ಶೆಟ್ಟಿ ಅವರನ್ನು ಆರಂಭದಲ್ಲಿ ಒಂದು ವರ್ಷದ ಅವಧಿಗೆ ಸುಪ್ರೀಂ ಕೋರ್ಟ್‌ಗೆ ವಿಶೇಷ ಕರ್ತವ್ಯಾಧಿಕಾರಿಯಾಗಿ ಪ್ರತಿನಿಯೋಜನೆ ಮಾಡಲು ಪರಿಗಣಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರಿಗೆ ಸುಪ್ರೀಂ ಕೋರ್ಟ್‌ ಪ್ರಧಾನ ಕಾರ್ಯದರ್ಶಿ (ಸೆಕ್ರೆಟರಿ ಜನರಲ್)‌ ವೀರೇಂದರ್‌ ಕುಮಾರ್‌ ಬನ್ಸಾಲ್‌ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿರುವ ಎಚ್‌ ಶಶಿಧರ ಶೆಟ್ಟಿ ಅವರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹಾಲಿ ಕರ್ತವ್ಯದಿಂದ ಬಿಡುಗಡೆ ಮಾಡಬೇಕು ಎಂದು ಸೆಪ್ಟೆಂಬರ್‌ 8ರಂದು ಕರ್ನಾಟಕ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದಿರುವ ಪತ್ರದಲ್ಲಿ ಕೋರಲಾಗಿದೆ.