<div class="paragraphs"><p>Supreme Court</p></div>

Supreme Court

 
ಸುದ್ದಿಗಳು

ಸ್ಥಳೀಯ ಸಂಸ್ಥೆ ಚುನಾವಣೆ ಮೀಸಲಾತಿ: ಸುಪ್ರೀಂಕೋರ್ಟ್ ಆದೇಶ ಹಿಂಪಡೆಯಲು ಕೋರಿದ ಮಹಾರಾಷ್ಟ್ರ ಸರ್ಕಾರ

Bar & Bench

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಿಟ್ಟಿರುವ ಶೇಕಡಾ 27ರಷ್ಟು ಸ್ಥಾನಗಳನ್ನು ಸಾಮಾನ್ಯ ವರ್ಗದ ಸ್ಥಾನಗಳಾಗಿ ಮರುನೋಟಿಫೈ ಮಾಡುವಂತೆ ಮಾಡಲು ರಾಜ್ಯ ಚುನಾವಣಾ ಆಯೋಗಕ್ಕೆ (SEC) ನಿರ್ದೇಶಿಸಿದ್ದ ತನ್ನ ಆದೇಶ ಹಿಂಪಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಮಹಾರಾಷ್ಟ್ರ ಸರ್ಕಾರ ಮನವಿ ಸಲ್ಲಿಸಿದೆ [ರಾಹುಲ್ ರಮೇಶ್ ವಾಘ್ ಮತ್ತು ಮಹಾರಾಷ್ಟ್ರ ಸರ್ಕಾರ ನಡುವಣ ಪ್ರಕರಣ].

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಶೇಖರ್ ನಾಫಡೆ ಅವರು, 2021ರ ಡಿಸೆಂಬರ್ 15ರ ನ್ಯಾಯಾಲಯದ ಆದೇಶವನ್ನು ಹಿಂಪಡೆಯುವಂತೆ ಕೋರಿದರು. ವಾದ ಆಲಿಸಿದ ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಜನವರಿ 19 ವಿಚಾರಣೆ ನಡೆಸಲು ಒಪ್ಪಿದೆ.

ಒಬಿಸಿ ವರ್ಗಕ್ಕೆ ಶೇ 27ರಷ್ಟು ಮೀಸಲಾತಿ ಒದಗಿಸುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಕೆಲ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ರಾಜ್ಯ ಚುನಾವಣಾ ಆಯೋಗ ಡಿಸೆಂಬರ್ 6, 2021 ರಂದು ಹೊರಡಿಸಿದ್ದ ಅಧಿಸೂಚನೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿತ್ತು.