A1
A1
ಸುದ್ದಿಗಳು

ಮಹಾರಾಷ್ಟ್ರ ಬಿಕ್ಕಟ್ಟು: ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ನಕಾರ

Bar & Bench

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಸೂಚನೆ ಮೇರೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಾಳೆ ಬೆಳಗ್ಗೆ 11ಕ್ಕೆ ನಡೆಯಲಿರುವ ವಿಶ್ವಾಸಮತ ಪರೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಸರ್ವಾಧಿಕಾರದಿಂದ ಮತ್ತು ಪ್ರಚೋದನೆಯಿಂದ ಕೂಡಿರುವ ರಾಜ್ಯಪಾಲರ ಪ್ರಶ್ನಿಸಿ ಶಿವಸೇನಾ ಸಚೇತಕ ಸುನೀಲ್ ಪ್ರಭು ಸಲ್ಲಿಸಿದ್ದ ಮನವಿಯ ವಿಚಾರಣೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆ ಬಿ ಪರ್ದಿವಾಲಾ ಅವರಿದ್ದ ಪೀಠದಲ್ಲಿ ನಡೆಯಿತು.

ವಿಶ್ವಾಸಮತ ಯಾಚನೆಯ ಫಲಿತಾಂಶ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

“ವಿಶ್ವಾಸಮತ ಯಾಚನೆಗೆ ತಡೆ ನೀಡುತ್ತಿಲ್ಲ. ನೋಟಿಸ್‌ ಜಾರಿ ಮಾಡುತ್ತಿದ್ದೇವೆ. ಇದಕ್ಕೆ ಪ್ರತಿ ಅರ್ಜಿ ಸಲ್ಲಿಸಬಹುದು. ಜುಲೈ 11ರಂದು ಪ್ರಕರಣಕ್ಕೆ ಸಂಬಂಧಿಸಿದ ಇತರೆ ಅರ್ಜಿಗಳೊಂದಿಗೆ ಅರ್ಹತೆ ಆಧಾರದಲ್ಲಿ ವಿಚಾರಣೆ ನಡೆಸುತ್ತೇವೆ. ಅರ್ಜಿ ಅಂತಿಮ ಫಲಿತಾಂಶವನ್ನು ಆಧರಿಸಿರುತ್ತದೆ” ಎಂದು ಪೀಠ ತಿಳಿಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ನಡೆದ ಸುದೀರ್ಘ ವಾದ- ಪ್ರತಿವಾದದ ವಿವರಗಳನ್ನು ಇಲ್ಲಿ ಗಮನಿಸಿ: