ಕೇಂದ್ರ ಸಚಿವ ನಾರಾಯಣ ರಾಣೆ ಅವರ ಕಂಪೆನಿಗೆ ಸೇರಿದ ಬಂಗಲೆ ನೆಲಸಮ ಮಾಡುವ ಆದೇಶ ಹಿಂಪಡೆಯುತ್ತಿರುವುದಾಗಿ ಮಹಾರಾಷ್ಟ್ರ ಸರ್ಕಾರದ ಅಡ್ವೊಕೇಟ್ ಜನರಲ್ (ಎಜಿ) ಅಶುತೋಷ್ ಕುಂಭಕೋಣಿ ಅವರು ಬಾಂಬೆ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದ್ದಾರೆ. ಎಜಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ ಅರ್ಜಿ ವಿಲೇವಾರಿ ಮಾಡಿತು. ಇದೇ ವೇಳೆ ಅಗತ್ಯ ಬಿದ್ದಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಹಕ್ಕನ್ನು ಕಾಯ್ದಿರಿಸಿ ಜಿಲ್ಲಾಧಿಕಾರಿಯವರು ಹೊರಡಿಸಿದ್ದ ಬಂಗಲೆಯ ನೆಲಸಮ ಅದೇಶವನ್ನು ಹಿಂಪಡೆಯಲಾಗಿದೆ ಎಂದು ನ್ಯಾಯಾಲಯವು ದಾಖಲಿಕೊಂಡಿತು.
ಮುಂಬೈನ ಜುಹುನಲ್ಲಿ ತಾವು ವಾಸಿಸುವ ಆದಿಶ್ ಬಂಗಲೆಗೆ ಸಂಬಂಧಿಸಿದಂತೆ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ನೀಡಿರುವ ನೋಟಿಸ್ ರದ್ದುಗೊಳಿಸುವಂತೆ ರಾಣೆ ತಮ್ಮ ಕಂಪನಿಯ ಮೂಲಕ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.