KSLSA 
ಸುದ್ದಿಗಳು

'ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0' ಅಭಿಯಾನ ಜನವರಿ 2ರಿಂದ ಆರಂಭ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್‌ಎಎಲ್‌ಎಸ್‌ಎ) ಮತ್ತು ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿ (ಎಂಸಿಪಿಸಿ) ನಿರ್ದೇಶನದಂತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

Bar & Bench

ಜನವರಿ 2ರಿಂದ 90 ದಿನಗಳ ಕಾಲ 'ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0' ವಿಶೇಷ ಅಭಿಯಾನ ರಾಜ್ಯಾದ್ಯಂತ ನಡೆಯಲಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್‌ಎಎಲ್‌ಎಸ್‌ಎ) ಮತ್ತು ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿ (ಎಂಸಿಪಿಸಿ) ನಿರ್ದೇಶನದಂತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಅಭಿಯಾನದಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ವ್ಯಾಜ್ಯಗಳು, ಮೋಟಾರು ಅಪಘಾತದ ಪ್ರಕರಣಗಳು, ಚೆಕ್ಕು ಅಮಾನ್ಯ, ವಾಣಿಜ್ಯ, ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕ ವ್ಯಾಜ್ಯ, ಡಿಆರ್‌ಟಿ, ಪಾಲುದಾರಿಕೆ, ಭೂಸ್ವಾಧೀನ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.

ಇದಕ್ಕಾಗಿ ತಾಲ್ಲೂಕು, ಜಿಲ್ಲಾ ನ್ಯಾಯಾಲಯಗಳು ಹಾಗೂ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿರುವ ಮಧ್ಯಸ್ಥಿಕೆ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಎಚ್‌ ಶಶಿಧರ್‌ ಶೆಟ್ಟಿ ತಿಳಿಸಿದ್ದಾರೆ.

ATTACHMENT.pdf
Preview