ಸುದ್ದಿಗಳು

ಅನಿಲ್ ದೇಶಮುಖ್‌ಗೆ ನೀಡಿದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಜಾರಿ ನಿರ್ದೇಶನಾಲಯ

Bar & Bench

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ ಡಿ) ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮೇಲ್ಮನವಿಯನ್ನು ಪ್ರಸ್ತಾಪಿಸಿದ ನಂತರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರಿದ್ದ ಪೀಠ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲು ಸಮ್ಮತಿಸಿತು.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಜಾರಿ ನಿರ್ದೇಶನಾಲಯಕ್ಕೆ ಅನುವು ಮಾಡಿಕೊಡುವ ಸಲುವಾಗಿ ಹೈಕೋರ್ಟ್ ಅಕ್ಟೋಬರ್ 13ರಿಂದ ಅನ್ವಯವಾಗುವಂತೆ ದೇಶಮುಖ್‌ಗೆ ಹೈಕೋರ್ಟ್‌ ಜಾಮೀನು ನೀಡಿತ್ತು.