Nupur sharma Facebook
ಸುದ್ದಿಗಳು

ಪ್ರವಾದಿ ಮೊಹಮ್ಮದ್‌ ಬಗ್ಗೆ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಮುಂಬೈ ಪೊಲೀಸ್‌

ಸುದ್ದಿವಾಹಿನಿಯೊಂದರಲ್ಲಿ ಜ್ಞಾನವಾಪಿ ಮಸೀದಿ ಕುರಿತ ಚರ್ಚೆಯ ವೇಳೆ ಶರ್ಮಾ ಅವರು ಪ್ರವಾದಿ ಮತ್ತವರ ಪತ್ನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

Bar & Bench

ಟೈಮ್ಸ್ ನೌ ಸುದ್ದಿವಾಹಿನಿಯಲ್ಲಿ ಜ್ಞಾನವಾಪಿ ಮಸೀದಿಯ ಕುರಿತು ನಡೆಯುತ್ತಿದ್ದ ಚರ್ಚೆಯ ವೇಳೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಮುಂಬೈ ವಿಭಾಗದ ರಾಝಾ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಇರ್ಫಾನ್ ಶೇಖ್ ನೀಡಿದ ದೂರಿನ ಆಧಾರದ ಮೇಲೆ ನಗರದ ಪೈದೋನಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Details

ನೂಪುರ್‌ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವೀಡಿಯೊದ ತುಣುಕೊಂದರ ಲಿಂಕ್‌ ಅನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದ್ದು ಟೈಮ್ಸ್ ನೌ ಸುದ್ದಿ ವಾಹಿನಿಯಲ್ಲಿ ಜ್ಞಾನವಾಪಿ ಮಸೀದಿ ವಿವಾದದ ಕುರಿತು ನಡೆದ ಚರ್ಚೆಯಲ್ಲಿ ಮುಸ್ಲಿಮರು ಆರಾಧಿಸುವ ಪ್ರವಾದಿ ಮೊಹಮ್ಮದ್‌ ಮತ್ತವರ ಪತ್ನಿ ಆಯೆಷಾ ವಿರುದ್ಧ ಆಕೆ ಕೆಲವು ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ. ಇಂತಹ ಹೇಳಿಕೆಗಳಿಂದಾಗಿ ನೂಪುರ್‌ ಇಡೀ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಶೇಖ್ ಪ್ರತಿಪಾದಿಸಿದ್ದಾರೆ.

ಐಪಿಸಿ ಸೆಕ್ಷನ್‌ಗಳಾದ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಮಾಡಿದ ದುರುದ್ದೇಪೂರ್ವಕ ಕೃತ್ಯ), 153 ಎ (ಧರ್ಮ ಜನಾಂಗ, ಜನ್ಮಸ್ಥಳ, ವಾಸಸ್ಥಳ ಭಾಷೆಯನ್ನಾಧರಿಸಿ ವಿವಿಧ ಗುಂಪುಗಳ ನಡುವೆ ದ್ವೇಷಕ್ಕೆ ಪ್ರಚೋದನೆ), 505(II) (ವರ್ಗಗಳ ನಡುವೆ ಶತ್ರುತ್ವ, ದ್ವೇಷ, ದುರದ್ದೇಶ ಸೃಷ್ಟಿಸುವ ಹೇಳಿಕೆ ನೀಡುವುದು) ಅಡಿ ಪ್ರಕರಣ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.