Vinay Kulkarni and Karnataka HC 
ಸುದ್ದಿಗಳು

ಯೋಗೀಶ್‌ ಗೌಡ ಕೊಲೆ ಸಾಕ್ಷಿಗಳಿಗೆ ಬೆದರಿಕೆ: ವಿನಯ ಕುಲಕರ್ಣಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

“ಅಧಿಕಾರ ವ್ಯಾಪ್ತಿ ಇಲ್ಲದ ನ್ಯಾಯಾಲಯದಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಹೀಗಾಗಿ, ತಾಂತ್ರಿಕ ಕಾರಣಗಳಿಂದ ಪ್ರಕರಣ ರದ್ದುಪಡಿಸಲಾಗುತ್ತಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ವಿವರಿಸಿದೆ.

Bar & Bench

ಧಾರವಾಡ ಜಿಲ್ಲಾ ಪಂಚಾಯಿತಿಯ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ ಗೌಡ ಕೊಲೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಅವರು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಸಂಬಂಧದ  ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ವಜಾಗೊಳಿಸಿದೆ.

ಪ್ರಕರಣ ರದ್ದತಿ ಕೋರಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

“ಅಧಿಕಾರ ವ್ಯಾಪ್ತಿ ಇಲ್ಲದ ನ್ಯಾಯಾಲಯದಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಹೀಗಾಗಿ, ತಾಂತ್ರಿಕ ಕಾರಣಗಳಿಂದ ಪ್ರಕರಣ ರದ್ದುಪಡಿಸಲಾಗುತ್ತಿದೆ” ಎಂದು ಪೀಠವು ಆದೇಶದಲ್ಲಿ ವಿವರಿಸಿದೆ.

ಸಾಕ್ಷಿಗಳಿಗೆ ಬೆದರಿಕೆಯೊಡ್ಡಿದ ಆರೋಪದಡಿ ವಿನಯ ಕುಲಕರ್ಣಿ ವಿರುದ್ಧ ಧಾರವಾಡದ ಪ್ರಧಾನ ಸಿವಿಲ್‌ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 195ಎ ಅಡಿ ಖಾಸಗಿ ದೂರು ದಾಖಲಿಸಲಾಗಿತ್ತು.

Vinay Kulkarni Vs CBI.pdf
Preview